ಮೈಸೂರು

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನೂತನ ಜಿಲ್ಲಾ ಠಾಣೆ ಕಚೇರಿಯನ್ನು ದಕ್ಷಿಣ ವಲಯ ಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಉದ್ಘಾಟಿಸಿದರು.

ನಗರದ ಜಯಚಾಮರಾಜೇಂದ್ರ ವೃತ್ತದ ಬಳಿಯ ಬಿಎಸ್‌ಎನ್‌ಎಲ್ ಕಚೇರಿ ಆವರಣದಲ್ಲಿ ಆರಂಭವಾಗಿರುವ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಸಿಗಬೇಕು, ತನಿಖೆಯು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಅಪರಾಧಿಗಳಿಗೆ ಶಿಕ್ಷೆ ಶೀಘ್ರವಾಗಿ ಆಗಬೇಕು ಎಂಬ ಉದ್ದೇಶದಿಂದ ನಾಗರಿಕ ಜಾರಿ ನಿರ್ದೇಶನಾಲಯದ ಠಾಣೆಗಳನ್ನು ಸರ್ಕಾರ ಆರಂಭಿಸಿದೆ ಎಂದರು.

ಇದನ್ನು ಓದಿ:ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ 

ಯಾವುದೇ ದೌರ್ಜನ್ಯ ಹಾಗೂ ಜಾತಿನಿಂದನೆ ಪ್ರಕರಣಗಳು ಇದ್ದಲ್ಲಿ ನೊಂದವರು ನೇರವಾಗಿ ಈ ಕಚೇರಿಗೆ ಬಂದು ದೂರು ಸಲ್ಲಿಸಬಹುದು. ಇದರ ಜೊತೆಗೆ ಸ್ಥಳೀಯ ಠಾಣೆಗಳಲ್ಲಿಯೂ ದೂರು ದಾಖಲಿಸಬಹುದು. ನಂತರ ದೂರು ಇಲ್ಲಿಗೆ ವರ್ಗಾವಣೆಗೊಂಡು ತನಿಖೆ ಇಲ್ಲಿಯೇ ನಡೆಯಲಿದೆ ಎಂದು ತಿಳಿಸಿದರು.

ಎಸ್‌ಸಿ, ಎಸ್‌ಟಿ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಗಳಲ್ಲಿ ದೂರು ದಾಖಲಿಸಬಹುದು. ಆದರೆ, ಇತರೆ ಪ್ರಕರಣಗಳ ನಡುವೆ ಈ ಪ್ರಕರಣಗಳ ತನಿಖೆ ನಡೆಸಿದಲ್ಲಿ ತನಿಖೆಯು ಗುಣಮಟ್ಟದಿಂದ ನಡೆಯಲು ಕಷ್ಟವಾಗುತ್ತದೆ. ಹೀಗಾಗಿ ಪ್ರತ್ಯೇಕ ಠಾಣೆಯನ್ನು ಆರಂಭಿಸಲಾಗಿದೆ. ಇದರಿಂದ ಆರೋಪಿತರಿಗೆ ಗರಿಷ್ಠ ಶಿಕ್ಷೆ ಆಗುವಂತೆ ತನಿಖೆ ನಡೆಸಲಾಗುತ್ತದೆ ಎಂದು ವಿವರಿಸಿದರು.

ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ದಾಖಲಾದ ಪ್ರಕರಣಗಳ ತನಿಖೆ ಪ್ರಭಾರ ಎಸ್‌ಪಿ ಎಲ್.ನಾಗೇಶ್ ಅವರ ನೇತೃತ್ವದಲ್ಲಿ ನಡೆಯಲಿದೆ. ಮೈಸೂರು ಜಿಲ್ಲೆಯ ಪ್ರಕರಣಗಳು ಡಿವೈಎಸ್‌ಪಿ ಅನುಷಾ ರಾಣಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಪ್ರಸ್ತುತ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಜಿಲ್ಲಾ ಠಾಣೆಯಲ್ಲಿ ಡಿವೈಎಸ್‌ಪಿ ಸೇರಿದಂತೆ 12 ಮಂದಿ ಕಾರ್ಯ ನಿರ್ವಹಿಸಲಿದ್ದಾರೆ. ಎಸ್‌ಸಿ, ಎಸ್‌ಟಿ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವ ಸಮಯದಲ್ಲಿ ಬೇಕಾದರೂ ಈ ಠಾಣೆಯಲ್ಲಿ ದೂರು ಸಲ್ಲಿಸಬಹುದು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

11 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

12 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

12 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

12 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

12 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

13 hours ago