ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಭರದಿಂದ ಸಿದ್ಧತೆ ಮಾಡಿಕೊಂಡಿದೆ.
ಪ್ರತಿಭಟನೆಗೆ ರೂಪುರೇಷ ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಕಾರ್ಯಕರ್ತರು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಏಪ್ರಿಲ್.4) ನಡೆಸಿದ ಸಭೆಯಲ್ಲಿ ಶಾಸಕ ಶ್ರೀವತ್ಸ, ಎಂಎಲ್‌ಸಿ ರವಿಕುಮಾರ್, ಮಾಜಿ ಶಾಸಕ ಜೆ.ಪ್ರೀತಮ್ ಗೌಡ, ಎಲ್.ನಾಗೇಂದ್ರ, ರಘು ಕೌಟಿಲ್ಯ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಕಾರ್ಯಕರ್ತರು ಭಾಗಿಯಾಗಿ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಏಪ್ರಿಲ್.7ರಂದು
ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಿರ್ಧರಿಸಿದೆ.