ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ ಸಂಜೆ ನಡೆದ ಜಂಬೂ ಸವಾರಿ, ಮತ್ತು ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಂಡಾಡಿದ್ದಾರೆ.
ಈ ಬಾರಿಯ ಮೈಸೂರು ದಸರಾ ಅದ್ಭುತವಾಗಿತ್ತು. ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಮೈಸೂರು ಜನತೆಯನ್ನು ನಾನು ಶ್ಲಾಘಿಸುತ್ತೇನೆ. ಈ ಬಾರಿಯ ಯೋಗ ದಿನದಂದು ನಾನು ಮೈಸೂರಿಗೆ ಭೇಟಿ ನೀಡಿದ್ದೆ. ಮೈಸೂರಿನ ಜನರೊಂದಿಗೆ ಬೆರೆಯುವ ಅವಕಾಶ ನನಗೆ ಒದಗಿತ್ತು ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಕರ್ನಾಟಕದ ಹೊಸನಗರದವರಾದ ನಿವಾನೆ ಕಲಾನಾಥ್ ಭಟ್ ಎಂಬ ಆರ್ ಎಸ್ಎಸ್ ಸ್ವಯಂಸೇವಕರು ಈ ಬಾರಿಯ ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿರುವುದು ಹಾಗೂ ಜಂಬೂ ಸವಾರಿಯು ಜನಸಮೂಹದ ನಡುವೆ ಸಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಫೋಟೋಗಳನ್ನು ನೋಡಿ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ, ಜಂಬೂ ಸವಾರಿಯನ್ನು ಮನಸಾರೆ ಶ್ಲಾಘಿಸಿದ್ದಾರೆ
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…