ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಭಾನುವಾರ ‘ಗ್ರೇಟರ್ ಮೈಸೂರು ಅಥವಾ ಗ್ರೇಟರ್ ವಿಷನ್ ನಗರದ ನಿಜವಾದ ಅಗತ್ಯವೇನು?’ ಎಂಬ ವಿಷಯ ಕುರಿತ ಸಾರ್ವಜನಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ನಗರದ ಐದು ಕಿಮೀ ನಂತರ ವ್ಯಾಪಿಸಿರುವ ಆಧುನಿಕ ಮೈಸೂರು ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜ್ಯ ಮತ್ತು ಕೇಂದ್ರಸರ್ಕಾರ ಎರಡೂ ಸೇರಿ ಮಾಡಬೇಕಾದ ಕೆಲಸವಿದು. ನಾವು ಗ್ರೇಟರ್ ಮೈಸೂರು ವಿರೋಧಿಗಳಲ್ಲ. ಆದರೆ, ಅದು ನಗರದ ಅಭಿವೃದ್ಧಿಗೆ ಪೂರಕವಾದ ಚೌಕಟ್ಟಿನಲ್ಲಿ ಆಗಬೇಕು ಎಂದು ಸ್ಪಷ್ಟಪಡಿಸಿದರು.
ನಗರೀಕರಣ ಹಾಗೂ ಅಭಿವೃದ್ಧಿಯ ದಿಕ್ಕಿನಲ್ಲಿ ಆಗುವ ಸಕಾರಾತ್ಮಕ ಹಾಗೂ ನಕಾರಾತ್ಮಕ ಬೆಳವಣಿಗೆಯನ್ನು ನಿಲ್ಲಿಸಲಾಗದು. ಆದರೆ, ಅಭಿವೃದ್ಧಿಯು ಒಳ್ಳೆಯ ಚೌಕಟ್ಟಿನಲ್ಲಿ ನಡೆಯಬೇಕು. ಆಗ ನಗರವು ನೈಸರ್ಗಿಕವಾಗಿ ಬೆಳೆಯುತ್ತದೆ. ಜನರಿಗೆ ಗುಣಮಟ್ಟದ ಜೀವನ ಸಿಗುತ್ತದೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ:-ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ
ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ‘ಗ್ರೇಟರ್ ಮೈಸೂರು ಎಂದರೆ ಆಡಳಿತದ ಪರಿಮಿತಿಯನ್ನು ವಿಸ್ತರಿಸುವುದಷ್ಟೇ ಆಗಿದೆ. ಏನೇನಿರಬೇಕು ಎಂಬುದನ್ನು ವರದಿಯಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ತಲುಪಿಸಬೇಕು’ ಎಂದರು. ಮೈಸೂರು ಮಹಾರಾಜರಿಗೆ ಇದ್ದ ದೂರದೃಷ್ಟಿತ್ವ ಈಗ ಆಡಳಿತ ನಡೆಸುತ್ತಿರುವವರಿಗೂ ಇರಬೇಕಾಗಿದೆ. ಪಾರಂಪರಿಕ ಹಾಗೂ ಸಾಂಸ್ಕೃತಿಕ ನಗರ ಎಂಬುದನ್ನೂ ಉಳಿಸಿಕೊಂಡು ಸಮಗ್ರ ಅಭಿವೃದ್ಧಿ ಮಾಡಬೇಕಾಗುತ್ತದೆ. ಮೈಸೂರಿನವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲವೂ ಗೊತ್ತಿದೆ. ನಗರಕ್ಕೂ ಹಾನಿಯಾಗದಂತೆ ಹಾಗೂ ಸೇರ್ಪಡೆ ಮಾಡಿಕೊಳ್ಳಲಾಗುವ ಪ್ರದೇಶಗಳು ಒಳಗೊಂಡಂತೆ ಸಮಗ್ರವಾದ ಅಭಿವೃದ್ಧಿ ಆಗಬೇಕು’ ಎಂದು ತಿಳಿಸಿದರು.
ನಿವೃತ್ತ ಐಎಎಸ್ ಅಧಿಕಾರಿ ರವೀಂದ್ರ, ‘ಮೈಸೂರು ವಿಶೇಷವಾದ ನಗರ. ಇದು ಮಾದರಿ ನಗರವಾಗಿ ಉಳಿಯಬೇಕು. ಯೋಜನೆ ಪ್ರಕಾರ ಬೆಳವಣಿಗೆ ಇರಬೇಕು’ ಎಂದರು.
ಆಯೋಜಕ ಡಾ.ಸುಶ್ರುತ್ ಗೌಡ ಮಾತನಾಡಿದರು. ಚಲನಚಿತ್ರ ಕಲಾವಿದ ಪ್ರಕಾಶ್ ಬೆಳವಾಡಿ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಅರ್ಥಶಾಸ್ತ್ರಜ್ಞ ಕೆ.ಸಿ.ಬಸವರಾಜ್, ಪತ್ರಕರ್ತ ಶ್ಯಾಮಸುಂದರ್ ವಟ್ಟಂ, ಉದ್ಯಮಿ ನಾಗರಾಜ್ ಗರ್ಗೇಶ್ವರಿ, ಡಾ.ರಮೇಶ್, ಕೆ.ವಿ.ಚೇತನ್, ಆಂಥೋನಿ ಪೌಲ್‌ರಾಜ್ ಪಾಲ್ಗೊಂಡಿದ್ದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…