ಮೈಸೂರು

ದೇಶದ ಮೊದಲ ಇಎಸ್‌ಡಿಎಂ ಟೆಕ್ ಯಾತ್ರೆಗೆ ಮೈಸೂರಿನಲ್ಲಿ ಚಾಲನೆ: ಪ್ರಿಯಾಂಕ್‌ ಖರ್ಗೆ

ಮೈಸೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ದೇಶದ ಮೊದಲ ಟೆಕ್‌ ಜಾತ್ರೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು (ಆಗಸ್ಟ್ 6) ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಇಂಡಿಯಾ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಐಇಎಸ್ಎ) ಸಹಯೋಗದಲ್ಲಿ 4ನೆ ಆವೃತ್ತಿ ಅನಾವರಣಗೊಳಿಸುತ್ತಿರುವ ಸಂದರ್ಭದಲ್ಲಿ ನೀಡಿರುವ ಸಂದೇಶದಲ್ಲಿ ಸಚಿವರು ಮೈಸೂರನ್ನು ಉದ್ಯೋಗಶೀಲ ನಗರವನ್ನಾಗಿ ವರ್ಧಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ, ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ, ಈ ಎಲ್ಲಾ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಏಕ್‌ರೂಪ್ ಕೌರ್ ಮಾತನಾಡಿ, ಜಾಗತಿಕ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಜೊತೆ ಕೈ ಜೋಡಿಸಿರುವುದು ಮೈಸೂರು-ಬೆಂಗಳೂರನ್ನು ಸೆಮಿಕಾನ್ ಹಬ್ ಆಗಿ ಮಾಡುವಲ್ಲಿ ಬಹುಮುಖ್ಯ ಪಾತ್ರವಹಿಸಲಿದೆ. ಮೈಸೂರು ಸೆಮಿಕಾನ್ ತಯಾರಿಕೆ ಕ್ಷೇತ್ರದಲ್ಲಿ ಹಾಗೂ ಬೆಂಗಳೂರು ಸೆಮಿಕಾನ್ ವಿನ್ಯಾಸ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಬೆಳೆಯಲಿವೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ, ದೇಶಿಯ ಹಾಗೂ ಮೈಸೂರಿನ ಹಲವಾರು ಕಂಪನಿಗಳ ಪ್ರತಿನಿಧಿಗಳು, ರುಚಿ ಬಿಂದಾಲ್, ಐಎಎಸ್, ಪರಿಣಿಕ ಪವನ್ ರಾಮ್ ಕೆಎಎಸ್, ಕೆಡೆಮ್ ಸಂಸ್ಥೆಯ ಸುಧೀರ್, ಗೌರವ್, ಸಂಜಯ್ ಗುಪ್ತಾ, ಚೇತನ್ ಹಾಗೂ ಮೊದಲಾದವರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

6 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

6 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

6 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

7 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

9 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

10 hours ago