Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಡಿಕೆಶಿ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಲ್ಲ, ತಿದ್ದುಪಡಿ ಬಗ್ಗೆ ಅಷ್ಟೇ ಹೇಳಿರೋದು: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಿಲ್ಲ. ಡಿಕೆಶಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರ ಆಗ್ರಹಕ್ಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಮಾತಾಡಿದಾಗ ಬೀದಿಗಳಿದು ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದರು. ಅವರು ಹೇಳಿದ ತಕ್ಷಣ ಯಾಕೆ ಹೆಗಡೆ ವಿರುದ್ಧ ಯಾವುದೇ ಕ್ರಮ ಕೈಗೊಳಲಿಲ್ಲ. ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸರ್ಕಾರದವರು, ಬಿಜೆಪಿಯಿಂದ ಸಂವಿಧಾನದ ಬಗ್ಗೆ ಕಲಿಯೋ ಅವಶ್ಯಕತೆ ಇಲ್ಲ. ನಮ್ಮ ಪಕ್ಷದ ನಿಲುವು ಸಂವಿಧಾನದ ರಕ್ಷಣೆಯಾಗಿದೆ. ಸಂವಿಧಾನದಲ್ಲಿ 371ಜೆ ತಿದ್ದುಪಡಿ ಇದೆ ಅಲ್ಲವಾ? ಅದನ್ನು ನಾವು ಮಾಡಿದ್ದು, ಡಾ.ಬಿ.ಆರ್‌.ಅಂಬೇಡ್ಕರ್‌ ಅವರೇ ಸಂವಿಧಾನ ತಿದ್ದುಪಡಿ ಮಾಡುವಂತೆ ಹೇಳಿದ್ದಾರೆ. ಆದರೆ ಬಿಜೆಪಿಯವರಿಗೆ ಸಂವಿಧಾನವೆಂಬುದು ಮನುಸ್ಮೃತಿವಾಗಬೇಕೆಂದು ಅವರೇ ಹೇಳಿದ್ದವರು ಎಂದು ಬಿಜೆಪಿ ತಿರುಗೇಟು ನೀಡಿದ್ದಾರೆ.

 

Tags: