ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಿಲ್ಲ. ಡಿಕೆಶಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರ ಆಗ್ರಹಕ್ಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಮಾತಾಡಿದಾಗ ಬೀದಿಗಳಿದು ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದರು. ಅವರು ಹೇಳಿದ ತಕ್ಷಣ ಯಾಕೆ ಹೆಗಡೆ ವಿರುದ್ಧ ಯಾವುದೇ ಕ್ರಮ ಕೈಗೊಳಲಿಲ್ಲ. ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸ್ಪಷ್ಟನೆ ನೀಡಿದ್ದಾರೆ.
ನಮ್ಮ ಸರ್ಕಾರದವರು, ಬಿಜೆಪಿಯಿಂದ ಸಂವಿಧಾನದ ಬಗ್ಗೆ ಕಲಿಯೋ ಅವಶ್ಯಕತೆ ಇಲ್ಲ. ನಮ್ಮ ಪಕ್ಷದ ನಿಲುವು ಸಂವಿಧಾನದ ರಕ್ಷಣೆಯಾಗಿದೆ. ಸಂವಿಧಾನದಲ್ಲಿ 371ಜೆ ತಿದ್ದುಪಡಿ ಇದೆ ಅಲ್ಲವಾ? ಅದನ್ನು ನಾವು ಮಾಡಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರೇ ಸಂವಿಧಾನ ತಿದ್ದುಪಡಿ ಮಾಡುವಂತೆ ಹೇಳಿದ್ದಾರೆ. ಆದರೆ ಬಿಜೆಪಿಯವರಿಗೆ ಸಂವಿಧಾನವೆಂಬುದು ಮನುಸ್ಮೃತಿವಾಗಬೇಕೆಂದು ಅವರೇ ಹೇಳಿದ್ದವರು ಎಂದು ಬಿಜೆಪಿ ತಿರುಗೇಟು ನೀಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…