Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಮದ್ಯ ಮಾರಾಟ ನಿಷೇಧ

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಮತ್ತು ಮತ ಎಣಿಕೆಯ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಮಧ್ಯ ಮಾರಾಟ ನಿಷೇಧ ಮಾಡಲಾಗಿದೆ.

ಜೂ.03ರಂದು ಮತದಾನ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಜೂ.01 ರ ಸಂಜೆ 4 ಗಂಟೆಯಿoದ ಜೂ.03 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮತ ಎಣಿಕೆ ಕಾರ್ಯವು ಜೂ.06 ರಂದು ನಡೆಯಲಿರುವುದರಿಂದ ನಗರ ಮತ್ತು ನಗರ ವ್ಯಾಪ್ತಿಯಿಂದ 05 ಕಿ.ಮೀ ವ್ಯಾಪ್ತಿಯವರೆಗೆ ಜೂ.05 ರಂದು ಮಧ್ಯರಾತ್ರಿ 12 ಗಂಟೆಯಿoದ ಜೂ.06 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮಾಲೀಕರು, ಅಧಿಭೋಗದಾರರು ಮತ್ತು ವ್ಯವಸ್ಥಾಪಕರು ಅಂಗಡಿ ಮುಚ್ಚಲು ಹಾಗೂ ಮೊಹರು ಮಾಡಿ ಅದರ ಕೀಯನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಡಾ. ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!