ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಲನಚಿತ್ರ ರಂಗದ ಪದಾಧಿಕಾರಿಗಳ ಜೊತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಆಶಯದಂತೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ನಟ ನಟಿಯರು ಕಲಾವಿದರ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಂಬಾರಿ ಬಸ್‌ನಲ್ಲಿ ಜಂಬೂ ಸವಾರಿಯ ದಿನ ಅರಮನೆ ಆವರಣದಿಂದ ಕೆ ಆರ್ ಸರ್ಕಲ್ ವರೆಗೆ ಮೆರವಣಿಗೆ ಮೂಲಕ ಕರೆದುಕೊಂಡು ಹೋಗಲಾಗುವುದು. ನಂತರ ಕಲಾವಿದರು ಹಾಗೂ ಕ್ರೀಡಾಪಟುಗಳನ್ನು ಕೆ ಆರ್ ಸರ್ಕಲ್ ನಿಂದ ಕರೆದುಕೊಂಡು ಬಂದು ಅರಮನೆ ಗ್ಯಾಲರಿಯಲ್ಲಿ ಬಿಡಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ರಾದ ನಟಿ ಡಾ.ಜಯಮಾಲಾ ಅವರು ಮಾತನಾಡಿ, ಚಲನಚಿತ್ರ ರಂಗವು 93 ವರ್ಷಗಳಿಂದ ನಡೆದು ಬಂದ ಹಾದಿ ಕುರಿತ ಮಾಹಿತಿಯನ್ನು ಹೊತ್ತ ಸ್ತಬ್ಧ ಚಿತ್ರವನ್ನು ನಿರ್ಮಾಣ ಮಾಡಲಾಗುವುದು. ಈ ಸ್ತಬ್ಧ ಚಿತ್ರದಲ್ಲಿ 30 ಪ್ರಖ್ಯಾತ ಕನ್ನಡ ಚಲನ ಚಿತ್ರನಟ ನಟಿಯರು ಮೆರವಣಿಗೆ ಮೂಲಕ 1 ಕಿಮೀ ದೂರದವರೆಗೆ ಕ್ರಮಿಸಿ ಅಭಿಮಾನಿಗಳಿಗೆ ಕೈಬಿಸುವರು. ನಂತರ ಅರಮನೆ ಆವರಣದ ಗ್ಯಾಲರಿಯಲ್ಲಿ ಬಂದು ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳುವರು ಎಂದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಆಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ ಕನ್ನಡ ಚಲನ ಚಿತ್ರ ರಂಗದ ಕಲಾವಿದರನ್ನು ಕರೆಸಿ ದಸರಾ ಮಹೋತ್ಸವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಕರ್ನಾಟಕ ಚಲನಚಿತ್ರ ರಂಗ ನಡೆದು ಬಂದ ಹಾದಿಯ ಕುರಿತು ಪ್ರದರ್ಶನ ಏರ್ಪಡಿಸಬೇಕು ಎಂದು ಮನವಿ ಮಾಡಿದರು.
ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ರಾಕ್ ಲೈನ್ ವೆಂಕಟೇಶ್ ಅವರು ಮಾತನಾಡಿ, ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಚಲನಚಿತ್ರ ಮಂಡಳಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…
ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…
ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…
ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…
ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…