ಮೈಸೂರು : ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಸೋಮವಾರ ಆಗಮಿಸಲಿದ್ದು, ಆ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಯ ಬಳಿ ನಿರ್ಮಾಣವಾಗಿರುವ ಡಿ.ದೇವರಾಜ ಅರಸು ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.
ಇದನ್ನು ಓದಿ: ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿ : ಪರಮೇಶ್ವರ್ ಹೇಳಿದ್ದೇನು?
ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ. ಭ್ರಾಂತಿಯೂ ಇಲ್ಲ. ಯಾವಾಗ ಏನು ಆಗಬೇಕೆಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.
ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರಿದ್ದಾರೆ. ಇನ್ನೂ ಸಚಿವರಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಅದು ತಪ್ಪಲ್ಲ, ಅದು ಸಹಜ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಸಚಿವ ಸಂಪುಟ ಸಭೆಯಲ್ಲಿ ಸಚಿವ ಕೆ. ಜೆ. ಜಾರ್ಜ್‌ಯೊಂದಿಗೆ ಗಲಾಟೆ ನಡೆದಿದೆ ಎಂಬುದು ಸರಿಯಲ್ಲ. ಸಭೆ ಸೇರುವುದೇ ಚರ್ಚೆ ಮಾಡಲು, ಅಲ್ಲಿ ಚರ್ಚೆ ಆಗಿದೆಯಷ್ಟೇ. ಅಲ್ಲಿ ಜಗಳವಾಗಿಲ್ಲ. ಚರ್ಚೆಯ ನಂತರ ಎಲ್ಲವೂ ಪರಿಹಾರವಾಗಿದೆ ಎಂದು ಸ್ಪಷ್ಟಪಡಿಸಿದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…