ಮೈಸೂರು: ಮುಡಾ ಪ್ರಕರಣಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ ಸೋಮಶೇಖರ್ ನೇತೃತ್ವದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಸ್ತೆ ತಡೆದು ಟೈರ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇತ್ತ ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿಯು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಧ್ಯಕ್ಷ ಕೆ.ಎಸ್ ಶಿವರಾಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಟ್ಟೆ ಬಿಟ್ಟಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ರಾಜ್ಯಪಾಲರ ಭಾವ ಚಿತ್ರವನ್ನು ಸುಟ್ಟು ಹಾಕಿ, ಟೈರ್‌ಗೆ ಬೆಂಕಿ ಹಚ್ಚಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರು ಮಧ್ಯೆ ವಾಗ್ವಾದವೂ ನಡೆಯಿತು.