ಮೈಸೂರು

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಮೈಸೂರಲ್ಲಿ ಭುಗಿಲೆದ್ದ ಆಕ್ರೋಶ

ಮೈಸೂರು: ಮುಡಾ ಪ್ರಕರಣಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ನಗರದ ರಾಮಸ್ವಾಮಿ ವೃತ್ತದಲ್ಲಿ ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ನೇತೃತ್ವದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ರಸ್ತೆ ತಡೆದು ಟೈರ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇತ್ತ ನ್ಯಾಯಾಲಯದ ಮುಂಭಾಗ ಗಾಂಧಿ ಪ್ರತಿಮೆ ಬಳಿಯು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಧ್ಯಕ್ಷ ಕೆ.ಎಸ್‌ ಶಿವರಾಮ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಟ್ಟೆ ಬಿಟ್ಟಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರರು, ರಾಜ್ಯಪಾಲರ ಭಾವ ಚಿತ್ರವನ್ನು ಸುಟ್ಟು ಹಾಕಿ, ಟೈರ್‌ಗೆ ಬೆಂಕಿ ಹಚ್ಚಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರು ಮಧ್ಯೆ ವಾಗ್ವಾದವೂ ನಡೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago