ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ ಪ್ರೇಮಿಗಳು ಮೈಸೂರು ಎಸ್‌ಪಿ ಕಚೇರಿಗೆ ಬಂದು ಮನವಿ ಮಾಡಿದ ಘಟನೆ ನಡೆದಿದೆ.
ಸುಮಾರು ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಂಗನಹಳ್ಳಿ ಗ್ರಾಮದ ಕೃಪಾ ಮತ್ತು ಧರಣೇಶ್ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ ಮಹದೇಶ್ವರ ದೇವಸ್ಥಾನದಲ್ಲಿ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದಾರೆ. ಆದರೆ, ಇವರ ಪ್ರೀತಿಗೆ ಪೋಷಕರ ವಿರೋಧ ಎದುರಾಗಿದೆ. ವಿಶೇಷವಾಗಿ ಯುವತಿ ತಂದೆ ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಗ್ರಾಮವನ್ನು ತೊರೆದು ಬಂದು ವಿವಾಹವಾಗಿದ್ದಾರೆ ಎನ್ನಲಾಗಿದೆ.
ಗುರುವಾರ ಬೆಳಿಗ್ಗೆ ಮೈಸೂರಿನ ಎಸ್‌ಪಿ ಕಚೇರಿಗೆ ಬಂದ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ಅವರನ್ನು ಭೇಟಿಯಾಗಿದ್ದಾರೆ. ನಾವು ಇಬ್ಬರೂ ವಯಸ್ಕರಾಗಿದ್ದೇವೆ. ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದೇವೆ. ಆದರೆ, ನನ್ನ ತಂದೆಯಿಂದ ನಮಗೆ ಜೀವ ಬೆದರಿಕೆ ಇದೆ. ದಯವಿಟ್ಟು ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಇನ್ನೊಂದೆಡೆ, ಕೃಪಾ ಕಾಣೆಯಾಗಿದ್ದಾಳೆ ಎಂದು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ಈಗಾಗಲೇ ದೂರು ದಾಖಲಿಸಿದ್ದಾರೆ. ಆದರೆ, ನಾನು ನಾಪತ್ತೆಯಾಗಿಲ್ಲ. ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ ಎಂದು ಕೃಪಾ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಇರುವ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ಯುವ ಜೋಡಿಗಳನ್ನು ಕಳುಹಿಸಿದ್ದಾರೆ. ಇದೀಗ ಅವರ ಪೋಷಕರಿಗೆ ವಿಚಾರ ತಿಳಿಸಲಾಗಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…