ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರೈತರ ಆತ್ಮಹತ್ಯೆ ಹಾಗು ಬಣವೆ ನಷ್ಟ , ಆಕಸ್ಮಿಕ ಮರಣ ಮುಂತಾದ ಪ್ರಕರಣಗಳಲ್ಲಿ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುತ್ತಿರುವ ಬಗ್ಗೆ ಪರಿಶೀಲಿಸುವ ಮೇಲ್ವಿಚಾರಣೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ಸೇವೆ ನೀಡುವಲ್ಲಿ ವಿಳಂಬ ಮಾಡಬಾರದೆಂದು ಜಿಲ್ಲಾಡಳಿತದ ವತಿಯಿಂದ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಕೃಷಿ ಉಪನಿರ್ದೇಶಕರಾದ ಧನಂಜಯ, ರಾಜು, ಸಹಾಯಕ ನಿರ್ದೇಶಕಿ ದಾಕ್ಷಾಯಿಣಿ, ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.





