ಮೈಸೂರು

ಜಿಲ್ಲೆಯ ರೈತರ ಹಿತರಕ್ಷಣೆ ನಮ್ಮೆಲ್ಲರ ಹೊಣೆ : ಅಪರ ಜಿಲ್ಲಾಧಿಕಾರಿ ಶಿವರಾಜು

ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರೈತರ ಆತ್ಮಹತ್ಯೆ ಹಾಗು ಬಣವೆ ನಷ್ಟ , ಆಕಸ್ಮಿಕ ಮರಣ ಮುಂತಾದ ಪ್ರಕರಣಗಳಲ್ಲಿ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುತ್ತಿರುವ ಬಗ್ಗೆ ಪರಿಶೀಲಿಸುವ ಮೇಲ್ವಿಚಾರಣೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಗತ್ಯ ಸೂಚನೆಗಳನ್ನು ನೀಡಿದರು.

ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ಸೇವೆ ನೀಡುವಲ್ಲಿ ವಿಳಂಬ ಮಾಡಬಾರದೆಂದು ಜಿಲ್ಲಾಡಳಿತದ ವತಿಯಿಂದ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಕೃಷಿ ಉಪನಿರ್ದೇಶಕರಾದ ಧನಂಜಯ, ರಾಜು, ಸಹಾಯಕ ನಿರ್ದೇಶಕಿ ದಾಕ್ಷಾಯಿಣಿ, ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago