ಮೈಸೂರು: ಕಾಂಗ್ರೆಸ್ ಪಕ್ಷ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದನ್ನು ವಿರೋಧಿಸಿ ಹಾಗೂ ಬೆಲೆ ಏರಿಕೆ ಖಂಡಿಸಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಪೋಸ್ಟರ್ ಚಳುವಳಿಯನ್ನು ನಡೆಸಿದರು.
ಇಂದು(ಜೂ.27) ನಗರದ ಅಗ್ರಹಾರ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಕಾಂಗ್ರೆಸ್ ಸಂವಿದಾನಕ್ಕೆ ಅಪಚಾರ ಮಾಡಿದೆ. ಈ ಹೊಣೆಗಾರಿಕೆ ಹೊತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪೋಷ್ಠರ್ ಗಳನ್ನು ಗೋಡೆಗಳಿಗೆ ಅಂಟಿಸಿ, ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರ ಹಾಕಿದರು.
ನಂತರ ಮಾತನಾಡಿದ ಶಾಸಕ ಟಿ.ಎಸ್. ಶ್ರೀವತ್ಸ, ದೇಶದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ತುರ್ತುಪರಿಸ್ಥಿತಿ ಕಪ್ಪುಚುಕ್ಕಿ ಎಲ್ಲಾ ಹಕ್ಕುಗಳ ಹರಣ ಕಾಂಗ್ರೆಸ್ ನಿಂದ ಆಗಿದೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಅಂದು ಸಂವಿಧಾನ ವಿರೋಧಿ ಕೃತ್ಯ ಮಾಡಿ ಇಂದು ಸಂವಿಧಾನದ ಪಾಠವನ್ನು ಮಾಡುತ್ತಿದೆ. ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಬಿಡಬೇಕು. ಕೂಡಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂತಾದ ಕಾಂಗ್ರೆಸ್ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ತುರ್ತು ಪರಿಸ್ಥಿತಿಯ ಕರಾಳ ನೆನಪಿಗೆ 50 ವರ್ಷವಾಗಿದ್ದು, ಜೂನ್ 25, 1975ರಲ್ಲಿ ದೇಶಕ್ಕೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದರು, ಬರೋಬ್ಬರಿ 21 ತಿಂಗಳು ಕಾಲ ತುರ್ತು ಪರಿಸ್ಥಿತಿ ಅಸ್ತಿತ್ವದಲ್ಲಿ ಇತ್ತು. 1975, ಜೂನ್ 25 ಭಾರತದ ಇತಿಹಾಸದಲ್ಲಿ ಕರಾಳ ದಿನ. ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ. ಅಲ್ಲದೆ ಇಡೀ ದೇಶ ತುರ್ತು ಪರಿಸ್ಥಿತಿಯ ಕಾರಾಳ ದಿನವನ್ನು ಆಚರಿಸುತ್ತಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅದನ್ನು ಸಂಭ್ರಮಿಸುವಂತೆ ವರ್ಷದಲ್ಲಿ ಎರಡನೇ ಬಾರಿಗೆ ಹಾಲಿನ ದರ ಏರಿಕೆ ಮಾಡಿರುವುದು ಖಂಡನೀಯ ಎಂದರು.
ಬಿಜೆಪಿ ಯುವಮೊರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್ ಮಾತನಾಡಿ, ಕಾಂಗ್ರೆಸ್ ಸಂವಿಧಾನವನ್ನು ತಿರಸ್ಕರಿಸಿ ತುರ್ತು ಪರಿಸ್ಥಿತಿ ಹೇರಿದನ್ನು ದೇಶದ ಯುವಕರು ಎಂದಿಗೂ ಮರೆಯೋದಿಲ್ಲ. ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ ಎಂದರು.
ರಾಹುಲ್ ಗಾಂಧಿ ಅವರು ತಮ್ಮ ಸ್ವರ್ಥಾಕ್ಕಾಗಿ ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ. ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ಜನರನ್ನ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಎಂದೂ ಅಂಬೇಡ್ಕರ್ ಅವರನ್ನು ಗೌರವಿಸಿಲ್ಲ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಮಾಡಿದಾಗಲೇ ನಮಗೆ ನಿರೀಕ್ಷೆ ಇತ್ತು ದಿನ ಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗುತ್ತದೆ ಎಂದು ಅದರಂತೆಯೆ ಹಾಲಿನ ದರವನ್ನು ಹೆಚ್ಚಿಸುವ ಮೂಲಕ ಬೆಲೆ ಏರಿಕೆಯ ಪರ್ವ ಪ್ರಾರಂಭಿಸಿದ್ದಾರೆ. ಇದು ನಿಲ್ಲಬೇಕೆಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿದರು. ಮೈಸೂರಿನ ಮಿನಿ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ…
ವರದಿ: ಮುದ್ದುರವಿ ಮದ್ದೂರು ಮದ್ದೂರು: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದು…
ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು ಮಾಡಿದ್ದು, ಅಕ್ರಮ ಫುಟ್‌ಪಾತ್ ತೆರವು ಕಾರ್ಯಾಚರಣೆ ಮಾಡಲಾಯಿತು. ಇಂದು…
ನಂಜನಗೂಡು: ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಕ್ಕಿದ್ದು, ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ.…