ಕಡಕೋಳ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಹೊರಿಡಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.
ಜಿಲ್ಲೆಯ ಕಡಕೋಳದಲ್ಲಿಂದು (ಆ.19) ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪಕ್ಷಪಾತ ನಡೆಸಿದ್ದಾರೆ. ಈ ನಡೆಯನ್ನು ಖಂಡಿಸಿ ಕಡಕೋಳ ಗ್ರಾಮದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪ್ರತಿಭಟನೆ ಸಂಬಂಧ ಮಾತನಾಡಿರುವ ಬಿಕೆಟಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತರ ರೂಪಿಸುವ ಮೂಲಕ ವಿಚಾರಣೆಗೆ ರಾಜ್ಯಪಾಲರು ಅನುಮತಿಸಿದ್ದಾರೆ. ಇದು ಖಂಡನೀಯ ಈ ಬಗ್ಗೆ ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಪಂ ಮಾಜಿ ಸದಸ್ಯ ಪಟೇಲ್ ಜವರೇಗೌಡರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಜಿಪಂ ಸದಸ್ಯ ಕೆ.ಆರ್ ನಾರಾಯಣ್ ಮುಖಂಡತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
33 ಹಳ್ಳಿ ಯಜಮಾನರು, ಸಿದ್ದರಾಮಯ್ಯ ಗೌಡ, ತಾಲೂಕು ಪಂಚಾಯಿತಿ ಸದಸ್ಯ ಶ್ರೀಕಂಠ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದರಾಮೇಗೌಡ, ಶಿವಲಿಂಗೇಗೌಡ, ಕೆ.ಪಿ ಮಾದೇವ, ಕೆಎನ್ ಹುಂಡಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರವಿ ಗೌಡ, ಕೃಷ್ಣಪ್ಪ, ದಾಸಪ್ಪ, ನಾರಾಯಣ್, ವೈಕುಂಠ ಮಾದೇಶ್, ರಂಗು ರಂಗಪ್ಪ, ಸೋಮಲಿಂಗ, ಮಲ್ಲೇಗೌಡ, ಹಾಲಿನ್ ಡೈರಿ ಅಧ್ಯಕ್ಷ ಬಿರೇಶ್, ಕಾಂಗ್ರೆಸ್ ಯುವ ಮುಖಂಡ ಕಡಕೋಳ ಶಿವಲಿಂಗ, ಲೋಕೇಶ್, ಭರತ್ ಕುಮಾರ, ಶಶಾಂಕ್ ಎಚ್.ಎಸ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.