ಮೈಸೂರು

ಮುಡಾ ಹಗರಣ: ರಾಜ್ಯಪಾಲರ ವಿರುದ್ಧ ಕಡಕೋಳ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಕಡಕೋಳ: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ ಹೊರಿಡಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಜಿಲ್ಲೆಯ ಕಡಕೋಳದಲ್ಲಿಂದು (ಆ.19) ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪಕ್ಷಪಾತ ನಡೆಸಿದ್ದಾರೆ. ಈ ನಡೆಯನ್ನು ಖಂಡಿಸಿ ಕಡಕೋಳ ಗ್ರಾಮದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪ್ರತಿಭಟನೆ ಸಂಬಂಧ ಮಾತನಾಡಿರುವ ಬಿಕೆಟಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜು, ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತರ ರೂಪಿಸುವ ಮೂಲಕ ವಿಚಾರಣೆಗೆ ರಾಜ್ಯಪಾಲರು ಅನುಮತಿಸಿದ್ದಾರೆ. ಇದು ಖಂಡನೀಯ ಈ ಬಗ್ಗೆ ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಪಂ ಮಾಜಿ ಸದಸ್ಯ ಪಟೇಲ್ ಜವರೇಗೌಡರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಜಿಪಂ ಸದಸ್ಯ ಕೆ.ಆರ್‌ ನಾರಾಯಣ್‌ ಮುಖಂಡತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

33 ಹಳ್ಳಿ ಯಜಮಾನರು, ಸಿದ್ದರಾಮಯ್ಯ ಗೌಡ, ತಾಲೂಕು ಪಂಚಾಯಿತಿ ಸದಸ್ಯ ಶ್ರೀಕಂಠ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದರಾಮೇಗೌಡ, ಶಿವಲಿಂಗೇಗೌಡ, ಕೆ.ಪಿ ಮಾದೇವ, ಕೆಎನ್ ಹುಂಡಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ರವಿ ಗೌಡ, ಕೃಷ್ಣಪ್ಪ, ದಾಸಪ್ಪ, ನಾರಾಯಣ್, ವೈಕುಂಠ ಮಾದೇಶ್, ರಂಗು ರಂಗಪ್ಪ, ಸೋಮಲಿಂಗ, ಮಲ್ಲೇಗೌಡ, ಹಾಲಿನ್ ಡೈರಿ ಅಧ್ಯಕ್ಷ ಬಿರೇಶ್, ಕಾಂಗ್ರೆಸ್ ಯುವ ಮುಖಂಡ ಕಡಕೋಳ ಶಿವಲಿಂಗ, ಲೋಕೇಶ್, ಭರತ್ ಕುಮಾರ, ಶಶಾಂಕ್‌ ಎಚ್‌.ಎಸ್‌ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

3 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

3 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

3 hours ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

3 hours ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

3 hours ago