ಮೈಸೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೇ ಮೈಸೂರಿನ 9 ಕಡೆ ಅಕ್ರಮವಾಗಿ ನಡೆಯುತ್ತಿರುವ ಎಂ ಸ್ಯಾಂಡ್, ಜಲ್ಲಿ ಮತ್ತಿತರ ಕಟ್ಟಡ ಸಾಮಗ್ರಿ ಮಾರಾಟ ಕೇಂದ್ರಗಳನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಲಾರಿ ಮತ್ತು ಟಿಪ್ಪರ್ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಯಿತು.
ನಗರದ ರಿಂಗ್ ರಸ್ತೆಯ ಯರಗನಹಳ್ಳಿ ಸ್ಮಶಾನದ ಸಮೀಪವಿರುವ ಮೈಸೂರು ಮೆಟ್ರೋ ಎಂ ಸ್ಯಾಂಡ್ ಡಿಪೋ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಗಣಿ ಅಧಿಕಾರಿಗಳು ಮತ್ತು ಮಹಾನಗರಪಾಲಿಕೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಮೆಟ್ರೋ ಎಂ ಸ್ಯಾಂಡ್ ಡಿಪೋದವರು ಸಾಮಾಜಿಕ ಜಾಲತಾಣ ಮತ್ತು ಕರಪತ್ರಗಳ ಮೂಲಕ ಕಡಿಮೆ ಬೆಲೆಗೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ನೀಡುವುದಾಗಿ ಗ್ರಾಹಕರನ್ನು ಆಕರ್ಷಿಸಿ ಕಳಪೆ ಗುಣಮಟ್ಟದ ಎಂ ಸ್ಯಾಂಡ್ ಮತ್ತಿತರ ಕಟ್ಟಡ ನಿರ್ಮಾಣ ವಸ್ತುಗಳನ್ನು ಮಾರುತ್ತಿದ್ದಾರೆ. ತೂಕದಲ್ಲೂ ಜನರಿಗೆ ಮೋಸ ಮಾಡುತ್ತಿದ್ದಾರೆ. ಕೇವಲ ಕಡಿಮೆ ಬೆಲೆ ಎಂದು ಇವರ ಆಕರ್ಷಣೆಗೆ ಒಳಗಾದ ಗ್ರಾಹಕರು ತಮಗೆ ಅರಿವಿಲ್ಲದಂತೆ ನಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ 3 ತಿಂಗಳ ಹಿಂದೆಯೇ ಗಣಿ ಇಲಾಖೆಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಬೃಹತ್ ಮಾರಾಟ ಕೇಂದ್ರಗಳಿಂದ ನಮ್ಮಂತಹ ಸಣ್ಣ ಪುಟ್ಟ ಲಾರಿ ಮಾಲೀಕರು ಮತ್ತು ಚಾಲಕರ ಹೊಟ್ಟೆಯ ಮೇಲೆ ಹೊಡೆದಂತಾಗುತ್ತಿದೆ ಎಂದು ಕಿಡಿ ಕಾರಿದರು.
ಸಂಘದ ಅಧ್ಯಕ್ಷ ಎನ್.ರಾಜೇಂದ್ರ, ಕಾರ್ಯದರ್ಶಿ ನಾಗಚಂದ್ರ, ಸಹ ಕಾರ್ಯದರ್ಶಿ ಮಹೇಶ್, ರೈತ ಮುಖಂಡ ಇ.ಎನ್.ಕೃಷ್ಣೇಗೌಡ, ಕಾನೂನು ಸಲಹೆಗಾರ ಸಿದ್ದಯ್ಯ ನಿರ್ದೇಶಕರಾದ ಮಹದೇವಸ್ವಾಮಿ, ಲೋಕೇಶ, ಮಂಜು, ಮಹದೇವ, ಶಂಕರ್, ಪ್ರಕಾಶ್, ಶಿವಣ್ಣ, ಪ್ರದೀಪ್, ಯೋಗೇಶ್ , ಮಲ್ಲೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…