ಮೈಸೂರು

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ : ವಿದ್ಯಾರ್ಥಿಗಳ ಆಕ್ರೋಶ

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು.

ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ ಬಳಿ ಜಮಾವಣೆಗೊಂಡ ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವಂತೆ ಹೇಳಿ 10 ವರ್ಷಗಳು ಕಳೆದವು, ಆದರೆ ಈವರೆಗೆ ಉದ್ಯೋಗ ನೀಡದೆ ವಂಚಿಸುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಇನ್ನು ರಾಜ್ಯದಲ್ಲಿ ನಾವೇ ಆಯ್ಕೆ ಮಾಡಿದ ಕಾಂಗ್ರೆಸ್ ಸರ್ಕಾರ ಬ್ಯಾಕ್‌ಲಾಗ್‌ ಹುದ್ದೆ ಸಹ ತುಂಬುತ್ತಿಲ್ಲ, ನೇರ ನೇಮಕಾತಿಯಂತೂ ದೂರದ ಮಾತಾಗಿದೆ. ಸರ್ಕಾರಿ ಉದ್ಯೋಗಗಳನ್ನು ನೀಡಬೇಕಾದ ರಾಜ್ಯ ಸರ್ಕಾರ ಖಾಸಾಗಿ ಕಂಪನಿಯ ಜೊತೆಗೆ ಉದ್ಯೋಗ ಮೇಳ ಮಾಡುವ ಮೂಲಕ ಖಾಸಗಿ‌ ಕಂಪನಿಗಳಿಗೆ ಬ್ರೋಕರ್ ಕೆಲಸ ಮಾಡಲು ಹೊರಟಿರುವುದು ನಾಚಿಕೇಡಿತನ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಶೋಧಕರ ಸಂಘದ ಮಾಜಿ ಅಧ್ಯಕ್ಷ  ಶಿವಶಂಕರ್, ದಲಿತ ವಿದ್ಯಾರ್ಥಿ ಪರಿಷತ್‌ ಅಧ್ಯಕ್ಷ ವಿಶ್ವ ಪ್ರಸಾದ್, ಸಂಶೋಧಕರಾದ ಪ್ರದೀಪ್ ಮುಮ್ಮಡಿ, ಧೀರಾಜ್‌, ಪುನೀತ್ ಆಲನಹಳ್ಳಿ, ಕೃಷ್ಣ, ಗೌತಮ್, ರಮ್ಯಾ, ಸ್ನೇಹ,  ಜಯ, ಮಮತಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…

17 mins ago

ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…

40 mins ago

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌…

54 mins ago

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌…

1 hour ago

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

2 hours ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

3 hours ago