various demands at mysuru
ಮೈಸೂರು: ರಾಜ್ಯ ಸರ್ಕಾರ ಪಂಪ್ ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ.ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ ಸಮರ್ಪಕವಾಗಿ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯನಗರದ ಎರಡನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ನಿಗಮದ ಎಂಡಿ ಕೆ.ಎಂ. ಮುನಿಗೋಪಾಲರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಮನವಿ ಪತ್ರವನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಸಿರು ಸೇನೆಯ ಕಾರ್ಯಾಧ್ಯಕ್ಷ ಮೋಹನ್ ರಾಜ್, ರಾಜ್ಯ ಸರ್ಕಾರ ಪಂಪ್ ಸೆಟ್‌ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ. ಡಿಪಾಸಿಟ್ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್‌ನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿದರು.
ಇದಕ್ಕೆ ಅಧಿಕಾರಿಗಳು ಒಂದು ತಿಂಗಳ ಗಡುವು ಪಡೆದಿದ್ದು ಅಷ್ಟರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಲೋಕೇಶ್, ಅಂಜನ್ ಕುಮಾರ್ ಮತ್ತಿತರರು ಹಾಜರಿದ್ದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…