buddha gayabuddha gaya
ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ ಪ್ರತಿಭಟಿಸಿದರು.
ಸಾಮ್ರಾಟ್ ಅಶೋಕ ಅಂದು ಸಂಸ್ಥಾಪಿಸಿದ ತಮ್ಮ ಸಾಮ್ರಾಜ್ಯದ ಉದ್ದಗಲಕ್ಕೂ ೮೪ಸಾವಿರ ಸ್ತೂಪಗಳ ಪೈಕಿ ಬುದ್ಧಗಯಾ ಮಹಾವಿಹಾರವು ಒಂದಾಗಿದ್ದು, ಬೌದ್ಧರಿಗೆ ಪವಿತ್ರ ಯಾತ್ರಾ ಸ್ಥಳವಾಗಿದೆ. ಸಾವಿರಾರು ವರ್ಷಗಳ ಕಾಲ ಬೌದ್ಧರ ಆಡಳಿತದಲ್ಲಿದ್ದ ಬುದ್ಧಗಯಾದ ಮಹಾಬೋಧಿ ಮಹಾವಿಹಾರವು ೧೯೧೯ರ ನಂತರ ಅನ್ಯ ಧರ್ಮೀಯರ ಆಡಳಿತದ ಹಿಡಿತದಲ್ಲಿದೆ. ಅದನ್ನು ರದ್ದುಪಡಿಸಿ ಬೌದ್ಧರ ಆಡಳಿತಕ್ಕೆ ನೀಡಬೇಕೆಂದು ಒತ್ತಾಯಿಸಿದರು.
ಕೇಂದ್ರಸರ್ಕಾರ ಕೂಡಲೇ ೧೯೧೯ರ ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ಮುಖಂಡರಾದ ಡಾ.ಆಕಾಶ್ ಲಾಮಾ, ಚಂದ್ರಬೋಧಿ ಪಾಟೀಲ್, ಎಂ.ವೆಂಕಟಸ್ವಾಮಿ, ಶಂಕರ್ ರಾಮಲಿಂಗಯ್ಯ, ಶಂಭುಲಿಂಗಯ್ಯ, ಮಂಜುನಾಥ್, ಪುರುಷೋತ್ತಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…