ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದೆ. ತಕ್ಷಣದಲ್ಲೇ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೈಕಮಾಂಡ್ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗೂ ನಾಯಕ ಸಮುದಾಯದ ಮುಖಂಡರು ಭಾಗಿಯಾಗಿದ್ದರು.





