ಮೈಸೂರು

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವ ಕಾಂಗ್ರೆಸ್‌ ಹೈಕಮಾಂಡ್ ನಡೆ ಖಂಡಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ಹೈಕಮಾಂಡ್‌ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಯಾವುದೇ ತಪ್ಪು ಮಾಡದಿದ್ದರೂ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದೆ. ತಕ್ಷಣದಲ್ಲೇ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೈಕಮಾಂಡ್‌ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಹಾಗೂ ನಾಯಕ ಸಮುದಾಯದ ಮುಖಂಡರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

3 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

4 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

4 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

5 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

8 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

13 hours ago