ಮೈಸೂರು

ದಸರಾ ಸಂದರ್ಭದಲ್ಲಿ ಹೋಟೆಲ್ ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆ ಒದಗಿಸಿ: ಡಾ. ಪಿ.ಶಿವರಾಜು

ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್‌ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ. ಪಿ ಶಿವರಾಜು ಅವರು ಹೋಟೆಲ್‌ಗಳ ಪ್ರತಿನಿಧಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಸಂಬಂಧ ಹೋಟೆಲ್ ಪ್ರತಿನಿಧಿಗಳೊಂದಿಗೆ ಗುರುವಾರ (ಆ.22) ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದಸರಾ ನಮ್ಮ ನಾಡಿನ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕ ಈ ನಾಡಹಬ್ಬಕ್ಕೆ ದೇಶ ವಿದೇಶಗಳಿಂದ ಪ್ರತಿಷ್ಠಿತ ಜನರೆಲ್ಲರೂ ಅತಿಥಿಗಳಾಗಿ ಆಗಮಿಸುತ್ತಾರೆ. ಅಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಲೋಪ ದೋಷವಾಗದಂತೆ ಉತ್ತಮ ರೀತಿಯಲ್ಲಿ ಅತಿಥಿ ಸತ್ಕಾರ, ಕೊಠಡಿಗಳ ನಿರ್ವಹಣೆ ನಡೆಸಿ ದಸರಾ ವನ್ನು ಯಶಸ್ವಿಗೊಳಿಸಲು ಹೋಟೆಲ್ ನವರು ಸಹಕರಿಸಬೇಕು ಎಂದು ಹೇಳಿ ಸೂಕ್ತ ನಿರ್ದೇಶನಗಳನ್ನು ನೀಡಿದರು.

ಸಭೆಯಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಸೇರಿದಂತೆ ವಿವಿಧ ಹೋಟೆಲ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

2 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

4 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

4 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

4 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

4 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

4 hours ago