ಮೈಸೂರು: ದಸರಾ ಸಂದರ್ಭದಲ್ಲಿ ಮೈಸೂರಿನ ಹೋಟೆಲ್‌ಗಳಲ್ಲಿ ಅತಿಥಿಗಳಿಗೆ ಸಮರ್ಪಕವಾದ ಸೇವೆಯನ್ನು ಒದಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ದಸರಾ ಸ್ವಾಗತ ಮತ್ತು ಸ್ಥಳಾವಕಾಶ ಸಮಿತಿಯ ಉಪವಿಶೇಷಾಧಿಕಾರಿಯಾದ ಡಾ. ಪಿ ಶಿವರಾಜು ಅವರು ಹೋಟೆಲ್‌ಗಳ ಪ್ರತಿನಿಧಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಸರಾ ಸಂಬಂಧ ಹೋಟೆಲ್ ಪ್ರತಿನಿಧಿಗಳೊಂದಿಗೆ ಗುರುವಾರ (ಆ.22) ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ದಸರಾ ನಮ್ಮ ನಾಡಿನ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕ ಈ ನಾಡಹಬ್ಬಕ್ಕೆ ದೇಶ ವಿದೇಶಗಳಿಂದ ಪ್ರತಿಷ್ಠಿತ ಜನರೆಲ್ಲರೂ ಅತಿಥಿಗಳಾಗಿ ಆಗಮಿಸುತ್ತಾರೆ. ಅಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಲೋಪ ದೋಷವಾಗದಂತೆ ಉತ್ತಮ ರೀತಿಯಲ್ಲಿ ಅತಿಥಿ ಸತ್ಕಾರ, ಕೊಠಡಿಗಳ ನಿರ್ವಹಣೆ ನಡೆಸಿ ದಸರಾ ವನ್ನು ಯಶಸ್ವಿಗೊಳಿಸಲು ಹೋಟೆಲ್ ನವರು ಸಹಕರಿಸಬೇಕು ಎಂದು ಹೇಳಿ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಸಭೆಯಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಸೇರಿದಂತೆ ವಿವಿಧ ಹೋಟೆಲ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…