ಮೈಸೂರು : ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಆರ್ ಆಸ್ಪತ್ರೆ ಆವರಣದಲ್ಲಿರುವ ಚೆಲುವಂಬ ಆಸ್ಪತ್ರೆಯ ಮಕ್ಕಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಠಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.
ಇದನ್ನು ಓದಿ: ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆದರೆ ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ. ಸರಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ, ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ 91 ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ ನಮಗೆ ವರದಿ ನೀಡಬೇಕು ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಚ್ಚರಿಕೆ ನೀಡಿದರು.
ಚಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ್ ಚೇತನ ಘಟಕ ಎಂದು ನಾಮಫಲಕವನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…