Provide good medical facilities to Anganwadi and school children
ಮೈಸೂರು : ಆರ್.ಬಿ.ಎಸ್.ಕೆ. ಕಾರ್ಯಕ್ರಮದ ಪ್ರಗತಿ ಉತ್ತಮಗೊಳಿಸಲು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಬೇಕು, ಹೆಚ್ಚಿನ ಚಿಕಿತ್ಸೆಗೆ ರೆಫರ್ ಮಾಡಲಾದ ಮಕ್ಕಳನ್ನು ಸೂಕ್ತ ಫಾಲೋ ಅಪ್ ಮಾಡುವುದು ಮತ್ತು ಚಿಕಿತ್ಸೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಲು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್ ಹೇಳಿದರು.
ಜುಲೈ 10 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಅನುಭವ ಮಂಟಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಹೃದಯ ಸಂಬಂಧ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ಮತ್ತು ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಲ್ಲಿ ಆರೋಗ್ಯ ತಪಾಸಣೆ ನಡೆಸಿ ಶೀಘ್ರ ಪತ್ತೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮಕ್ಕಳಲ್ಲಿ ಕಂಡು ಬರುವ ನ್ಯೂನತೆ ಮತ್ತು ಖಾಯಿಲೆಗಳನ್ನು(Early Detection and Management of 4D’s)ವೈದ್ಯಕೀಯ ಹಾಗೂ ಶಸ್ತ್ರ ಚಿಕಿತ್ಸೆಯನ್ನು ನೀಡಿ ಗುಣಪಡಿಸುವುದು ಈ ಮೂಲಕ ಶಿಶು ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.
ಶಿಶು ಮರಣಕ್ಕೆ ತುರ್ತು ಕ್ರಮ: ಶಿಶು ಮರಣ ಪ್ರಕರಣಗಳಲ್ಲಿ ತಡೆಗಟ್ಟಬಹುದಾದ (preventable e) ಪ್ರಕರಣಗಳನ್ನು ಕಡಿಮೆ ಪ್ರಮಾಣಕ್ಕೆ ಇಳಿಸಲು ಪರಿಸ್ಥಿತಿ ಅನುಗುಣವಾಗಿ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ಶಿಶು ಮರಣ ಪ್ರಕರಣಗಳ ತಾಲ್ಲೂಕುವಾರು ಸಂಪೂರ್ಣ ಮಾಹಿತಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ Facility & community levelDrmï ನಡೆಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ವರದಿಯನ್ನು ಸಲ್ಲಿಸಲು ಸೂಚಿಸಿದರು.
ತಾಯಿ ಮರಣ ಪ್ರಕರಣಗಳಲ್ಲಿ ಜಿಲ್ಲಾ ಮಟ್ಟದ Technical expert committee ಯ ಸ್ಪಷ್ಟ ಅಭಿಪ್ರಾಯದ ವರದಿ ಪಡೆದು ಆ ವರದಿಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಕಾಯಕಲ್ಪ ಕಾರ್ಯಕ್ರಮದ ಪ್ರಗತಿಯಲ್ಲಿ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಶೇ 100% ಗುರಿ ಸಾಧಿಸಲು ಸೂಚಿಸಿದರು.
ಎಲ್ಲಾ ಆರೋಗ್ಯ ಕೇಂದ್ರಗಳು ಯಾವ ತಾಲ್ಲೂಕು ಮತ್ತು ಯಾವ ಸಂಸ್ಥೆಗಳಲ್ಲಿ ಬಾಕಿ ಇದೆ ಎಂದು ಪರಿಶೀಲಿಸಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಅಂತರಿಕ, ರಾಜ್ಯ ಮತ್ತು ರಾಷ್ಟ್ರೀಯ ಮೌಲ್ಯಮಾಪನದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಲು ಕ್ರಮವಹಿಸುವಂತೆ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ಸಂಬಂಧಪಟ್ಟ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚಿಸುವಂತೆ ನಿರ್ದೇಶನ ನೀಡಿದರು.
ಗ್ರಾಮ ಪಂಚಾಯತ್ನಲ್ಲಿ ನಡೆಯುವ ಪಿ.ಡಿ.ಒಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮತ್ತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಕಂದಾಯ ಅಧಿಕಾರಿಗಳ ಮಾಸಿಕ ಸಭೆಯಲ್ಲಿ ಜಿಲ್ಲಾ ಸರ್ವೆಕ್ಷಣಾಧಿಕಾರಿಗಳು / ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಸಂಬoಧಪಟ್ಟ ವೈದ್ಯಾಧಿಕಾರಿಗಳು ಭಾಗವಹಿಸಲು ಸೂಚಿಸಿದರು. ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ವೈದ್ಯಕೀಯ ಘನ ಬಯೋ ಮೆಡಿಕಲ್ ತ್ಯಾಜ್ಯ ವಸ್ತುಗಳ ವಿಲೇವಾರಿ ನಿರ್ವಹಣೆ ಸರ್ಕಾರ ನಿಗಧಿಪಡಿಸಿರುವ ಮಾರ್ಗಸೂಚಿ ಅನುಸಾರ ಕ್ರಮವಹಿಸಲು ಸೂಚಿಸಿದರು.
ಸಮಗ್ರ ರೋಗಗಳ ಸರ್ವೇಕ್ಷಣಾ ಕಾರ್ಯಕ್ರಮ (IDSP)ದಡಿ ಕೋವಿಡ್, Influenza H1N1,, ನಾಯಿ ಕಡಿತ ಮತ್ತು ಹಾವು ಕಡಿತ ಪ್ರಕರಣಗಳ ವದರಿಯಾದ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಕೊಳ್ಳಲು ಸೂಚಿಸಿದರು.
ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (NTEP):- NTEP ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿನ ಟಿ.ಬಿ ಘಟಕಗಳ 2025ರ ಜನವರಿ ಮಾಹೆಯಿಂದ ಜೂನ್ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯಲ್ಲಿ ಈವರೆಗೂ 75, ಮರಣ ಹೊಂದಿದ್ದು ಶೇ.7 ರಷ್ಟು ಪ್ರಮಾಣದಲ್ಲಿದ್ದು ಇದು ಹೆಚ್ಚಾಗಿರುತ್ತದೆ. ಶೇ. 5 ರೊಳಗಿರಬೇಕು. 75 ಟಿಬಿ ಸಾವಿನ ಪ್ರಕರಣಗಳ Death Audit ವರದಿಯನ್ನು ವೈದ್ಯಾಧಿಕಾರಿಗಳ ದೃಢೀಕರಣದೊಂದಿಗೆ ಎಸ್.ಟಿ,ಎಸ್ ಸಿಬ್ಬಂದಿಗಳು ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮದಡಿ ಸರ್ವೇಕ್ಷಣಾ ಕಾರ್ಯ ಚಟುವಟಿಕೆಯು ಪ್ರತಿ ಬುಧವಾರದಂದು ಕ್ಷೇತ್ರ ಮಟ್ಟದಲ್ಲಿ ಕಾರ್ಯ ಪ್ರವೃತ್ತವಾಗಿದ್ದು ಅದರಂತೆ ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 78 ಪ್ರಕರಣಗಳು ದೃಢಪಟ್ಟಿರುತ್ತವೆ. ಈ ಪೈಕಿ ತಿ. ನರಸೀಪುರ ಹಾಗೂ ನಂಜನಗೂಡು ಮತ್ತು ಮೈಸೂರಿನ ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಸಂಬoಧಪಟ್ಟ ವೈದ್ಯಾಧಿಕಾರಿಗಳು ಆದ್ಯತೆಯ ಮೇರೆಗೆ ಸರ್ವೇಕ್ಷಣ ಕಾರ್ಯ ಚಟುವಟಿಕೆಯನ್ನು ತ್ವರಿತಗೊಳಿಸಿ ಸಂಶಯಾತ್ಮಕ ಪ್ರಕರಣಗಳನ್ನು ಜಿಲ್ಲಾ ಮಟ್ಟಕ್ಕೆ ತುರ್ತಾಗಿ ವರದಿ ಮಾಡಲು ಎಂದು ಹೇಳಿದರು.
ಮಾನಸಿಕ ಆರೋಗ್ಯ ಕಾರ್ಯಕ್ರಮಮದಡಿಯಲ್ಲಿ ಅನುಷ್ಠಾನವಾಗುತ್ತಿರುವ ಮನೋಚೈತನ್ಯ ಸಲಹಾ ಕೇಂದ್ರವನ್ನು ಪ್ರತಿ ಮಂಗಳವಾರದಂದು ಕಡ್ಡಾಯವಾಗಿ ನಿರ್ವಹಿಸುವುದು ಹಾಗೂ ಸಂಬಂಧಪಟ್ಟ ಪೋಟೊ ಪ್ರತಿಗಳನ್ನು ವಾಟ್ಸ್ ಆಪ್ ಮೂಲಕ ಹಂಚಿಕೊಳ್ಳಬೇಕು. ಎಲ್ಲಾ ವೃಂದದ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ KAMS ಮೂಲಕ ಶೇ.100 ಹಾಜರಾತಿಯನ್ನು ನಿರ್ವಹಿಸಲು ಸೂಚಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಮೈಸೂರು. ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು, ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಸೇರಿದಂತೆ ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿಗಳು, ಜಿಲ್ಲಾ ಶುಶ್ರೂಷಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…