Mysore
16
overcast clouds

Social Media

ಗುರುವಾರ, 08 ಜನವರಿ 2026
Light
Dark

ಜನಸ್ಪಂದನ ಕಾರ್ಯಕ್ರಮ: 108 ಅರ್ಜಿಗಳು ಸ್ವೀಕಾರ, ಸಮಸ್ಯೆಗಳ ಪರಿಹಾರಕ್ಕೆ ವಾರದ ಗಡುವು

ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು(ಜೂ.20) ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಕುಂದು-ಕೊರತೆಗಳ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಸ್ಮಶಾನಗಳನ್ನು ಕೆರೆಗಳಾಗಿ ಮಾರ್ಪಾಡು ಮಾಡಲಾಗಿದ್ದು ಅಂತಹ ಸ್ಮಶಾಣಗಳಿಗೆ ಪರ್ಯಾಯ ಸ್ಥಳವನ್ನು ನಿಗದಿ ಮಾಡಿ ಕೆರೆಯನ್ನು ರಕ್ಷಿಸುವ ಕೆಲಸ ಆಗಬೇಕು. ಯಾವುದೇ ಸರ್ಕಾರಿ ಕಟ್ಟಡಗಳನ್ನು ಕೆಡವಲು ಮಾಡುವ ಮೊದಲು ಕಟ್ಟಡದ ಕುಂದು ಕೊರತೆಯನ್ನು ತಿಳಿಸಿ ತಾಂತ್ರಿಕ ಇಲಾಖೆಯಿಂದ ಅನುಮತಿಯನ್ನು ಪಡೆದು ನಂತರದಲ್ಲಿ ಕೆಡವಲು ಮುಂದಾಗಬೇಕು ಎಂದು ಸೂಚಿಸಿದರು.

ಧಾರಾಕಾರ ಮಳೆಯಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕರಿಗೆ ಈಗಾಗಲೇ ಸಹಾಯಧನವನ್ನು ತಲುಪಿಸುವ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸಹಾಯಧನವನ್ನು ಅರ್ಹ ಸಾರ್ವಜನಿಕರಿಗೆ ತಲುಪಲಿದೆ ಎಂದು ಹೇಳಿದರು.

Tags:
error: Content is protected !!