ಮೈಸೂರು : ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ಬೆದರಿಕೆ ಬಂದಿದೆ ಎನ್ನಲಾಗಿದೆ.
ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನಿಂದ ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಕಾಲ್ ಮಾಡಿ ಕೊಲೆ ಬೆದರಿಕೆ ಹಾಕಲಾಗಿದ್ದು, NEXT YOU-WILL KILL ಎಂದು ಬರೆದು ಪೋಸ್ಟ್ ಮಾಡಲಾಗಿದೆ.
ಈ ಸಂಬಂಧ ಉದಯಗಿರಿ ಪೊಲೀಸರು ಕೋರ್ಟ್ ಆದೇಶ ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ.