ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಕರಣ ಸಂಬಂಧ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ಮೇಲೆ ನಂಬಿಕೆ ಹೆಚ್ಚಾಗಿದೆ.
ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ನಟ ದರ್ಶನ್ ತಪ್ಪು ಮಾಡಿದ್ರೆ ಅವರಿಗೆ ತಕ್ಕ ಶಿಕ್ಷೆಯಾಗುತ್ತೆ. ಚಿತ್ರರಂಗದ ನಾಯಕ ನಟ ಈ ರೀತಿ ಅಮಾನವೀಯ ಕೃತ್ಯಕ್ಕೆ ಇಳಿದಿರುವುದು ಭಾರೀ ಬೇಸರದ ಸಂಗತಿ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಶಾಸಕರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕೃತ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನೇ ವಿಡಿಯೋ ನೋಡಿದ್ದೇನೆ ಎಂದಿದ್ದು, ದರ್ಶನ್ ಪರ ಯಾರೂ ಕೂಡ ಮಾತನಾಡಬಾರದು ಅಂತಾ ಸೂಚನೆ ನೀಡಿದ್ದಾರೆ ಎಂದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…