ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ.
ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ ಮೃತ ಮಹಿಳೆ. 13 ವರ್ಷಗಳ ಹಿಂದೆ ಕಳಲೆ ಗ್ರಾಮದಿಂದ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ. ದಂಪತಿ ನಡುವೆ ದಾಂಪತ್ಯ ಕಲಹವಾಗಿ ಎರಡು ವರ್ಷಗಳಿಂದ ದೂರವಾಗಿದ್ದರು.
ರಾತ್ರಿ 10 ಗಂಟೆ ಸಮಯದಲ್ಲಿ ಮನೆಗೆ ಬಂದ ಪತಿ ಮಹೇಶ್ ಪತ್ನಿ ಸುಧಾ ನಡುವೆ ಜಗಳವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ರಿಪೀಸ್ ಪಟ್ಟಿಯಿಂದ ಪತ್ನಿಯ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿಯೇ ಪತ್ನಿ ಸುಧಾ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್.ಪಿ.ಮಲ್ಲಿಕಾರ್ಜುನ್ ಬಲದಂಡಿ, ಡಿವೈಎಸ್ಪಿ ರಘು, ವೃತ್ತ ನಿರೀಕ್ಷಕ ಆನಂದ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಮಹೇಶ್ ಪರಾರಿಯಾಗಿದ್ದಾನೆ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





