r ashok
ಮೈಸೂರು : ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರ 10 ವರ್ಷಗಳ ಆಡಳಿತ ಹಾಗೂ ನರೇಂದ್ರ ಮೋದಿಯವರ 11 ವರ್ಷಗಳ ಆಡಳಿತಕ್ಕೆ ಹೋಲಿಸಿದರೆ, ನಾಲ್ಕು ಪಟ್ಟು ಅಧಿಕ ಅಭಿವೃದ್ಧಿಯಾಗಿದೆ. ಜಗತ್ತಿನಲ್ಲಿ ಆರ್ಥಿಕತೆಯಲ್ಲಿ ಭಾರತ 10-11 ನೇ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಮುಂದೆ ಅದನ್ನು ಮೂರನೇ ಸ್ಥಾನಕ್ಕೆ ಪ್ರಧಾನಿ ಮೋದಿ ಕೊಂಡೊಯ್ಯಲಿದ್ದಾರೆ. ಇಂದಿರಾಗಾಂಧಿ ಕಾಲದಲ್ಲಿ ಗೋದಿಗೆ ಬೇರೆ ದೇಶದ ಮುಂದೆ ಕೈಯೊಡ್ಡುವ ಪರಿಸ್ಥಿತಿ ಇತ್ತು. ಪ್ರಧಾನಿ ಮೋದಿ ಕಾಲದಲ್ಲಿ 100 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದರು.
ಯುಪಿಎ ಕಾಲದಲ್ಲಿ ತಲಾ ಆದಾಯ 6,000 ರೂ. ಇದ್ದರೆ, ಈಗ 20,000 ರೂ. ಆಗಿದೆ. ಆಗ ಗ್ಯಾಸ್ ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಇದ್ದರೆ, ಈಗ 500 ರೂ. ಇದೆ. ಸಬ್ಸಿಡಿ ರಹಿತ ದರ ಆಗ 1,250 ರೂ. ಇದ್ದರೆ, ಈಗ 850 ರೂ. ಇದೆ. ಯುಪಿಎ ಹತ್ತು ವರ್ಷದಲ್ಲಿ 9 ಸಾವಿರಕ್ಕೂ ಅಧಿಕ ಉಗ್ರ ದಾಳಿಯಾಗಿತ್ತು. ಈಗ ಪ್ರತಿ ದಾಳಿ ನಡೆಯುತ್ತಿದೆ. ಮುಂಬೈಯಲ್ಲಿ ದಾಳಿಯಾದಾಗ ಅದಕ್ಕೆ ಪ್ರತ್ಯುತ್ತರ ನೀಡಲೇ ಇಲ್ಲ. ಪಹಲ್ಗಾಮ್‌ನಲ್ಲಿ ದಾಳಿಯಾದಾಗ ಕೂಡಲೇ ಉಗ್ರರ ತಾಣಗಳನ್ನು ನಮ್ಮ ಯೋಧರು ಧ್ವಂಸ ಮಾಡಿದ್ದಾರೆ ಎಂದರು.
ಹಿಂದೆ 387 ಮೆಡಿಕಲ್ ಕಾಲೇಜುಗಳಿದ್ದು, ಈಗ 704 ಮೆಡಿಕಲ್ ಕಾಲೇಜುಗಳಿವೆ. ಆಗ 74 ವಿಮಾನ ನಿಲ್ದಾಣಗಳಿದ್ದು, ಈಗ 149 ಆಗಿದೆ. ಆಗ ರಾಷ್ಟ್ರೀಯ ಹೆದ್ದಾರಿ 91,000 ಕಿ.ಮೀ. ಇದ್ದಿದ್ದು, ಈಗ 1.45 ಲಕ್ಷ ಕಿ.ಮೀ. ಆಗಿದೆ. 7 ಏಮ್ಸ್ ಇದ್ದಿದ್ದು, 22 ಆಗಿದೆ. 82,000 ಮೆಡಿಕಲ್ ಸೀಟುಗಳಿದ್ದಿದ್ದು, ಈಗ 1.50 ಲಕ್ಷ ಆಗಿದೆ. ಆಗ ದೇಶದ ಬಜೆಟ್ 17 ಲಕ್ಷ ಕೋಟಿ ರೂ. ಇದ್ದರೆ, ಈಗ 50.65 ಲಕ್ಷ ಕೋಟಿ ರೂ. ಆಗಿದೆ. ಎಲ್‌ಇಡಿ ಬಲ್ಬ್‌ಗೆ ಆಗ 450 ರೂ. ಇದ್ದಿದ್ದು, ಈಗ 70 ರೂ. ಗೆ ಸಿಗುತ್ತಿದೆ ಎಂದರು.
ಮೊದಲು ಬೇರೆ ದೇಶದಲ್ಲಿ ಬುಲೆಟ್ ರೈಲು ನೋಡುತ್ತಿದ್ದೆವು. ಈಗ ನಮ್ಮ ದೇಶದಲ್ಲೇ 60% ಕಾಮಗಾರಿ ಮುಗಿದು ಮುಂದೆ ಬುಲೆಟ್ ರೈಲು ಬರಲಿದೆ. ಕೃಷಿಗೆ ಮೊದಲು 30,000 ಕೋಟಿ ರೂ.ಸಬ್ಸಿಡಿ ಸಿಗುತ್ತಿದ್ದರೆ, ಈಗ 1.27 ಲಕ್ಷ ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಆಗ 14 ಕೋಟಿ ಅಡುಗೆ ಅನಿಲ ಸಂಪರ್ಕವಿದ್ದರೆ, ಈಗ 31 ಕೋಟಿ ಆಗಿದೆ. ಹನ್ನೊಂದು ವರ್ಷಗಳಲ್ಲಿ 4 ಕೋಟಿ ಮನೆ, 11 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 27 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್‌ನವರು ಎಂದಿಗೂ ನಕ್ಸಲ್ ಪರವಾಗಿದ್ದರು. ಈಗ ನಕ್ಸಲ್ ಚಳವಳಿಯನ್ನು ಸಂಪೂರ್ಣವಾಗಿ ಮಟ್ಟಹಾಕುವ ಗುರಿ ಇರಿಸಿಕೊಳ್ಳಲಾಗಿದೆ. ಈಶಾನ್ಯ ರಾಜ್ಯಗಳಲ್ಲೂ ದೊಡ್ಡ ಅಭಿವೃದ್ಧಿ ಕೆಲಸಗಳಾಗಿವೆ. ಜಮ್ಮು-ಕಾಶ್ಮೀರವನ್ನು ಬಿಟ್ಟುಬಿಡೋಣ ಎಂಬ ಮನಸ್ಥಿತಿ ಇತ್ತು. ವಿಶೇಷ ಸ್ಥಾನಮಾನ ರದ್ದಾದ ಬಳಿಕ ಅಲ್ಲಿ ಅಭಿವೃದ್ಧಿ ಹೆಚ್ಚಿದೆ. ಪ್ರವಾಸೋದ್ಯಮದಿಂದ ಅಲ್ಲಿನ ಜನರ ಆದಾಯ ಅಧಿಕವಾಗಿದೆ ಎಂದರು.
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…