ಮೈಸೂರು

ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಕೆ: ಕಾರ್ಯಾಚರಣೆ ಆರಂಭ

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ ಆದೇಶವನ್ನು ಪಾಲಿಸಲು ಮುಂದಾಗಿದೆ.
ಇಂದಿನಿಂದ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ತಾಲ್ಲೂಕುಗಳಲ್ಲಿ 21 ದಿನಗಳ ಕಾಲ ಕಾರ್ಯಾಚರಣೆ ನಡೆಯಲಿದೆ. ದುಬಾರೆ, ಮತ್ತಿಗೋಡು, ಆನೆ ಚೌಕಿಯಿಂದ 8 ಸಾಕಾನೆಗಳನ್ನು ಬಳಸಿ ಹಾಸನ ಜಿಲ್ಲೆಯ ಬೇಲೂರು, ಆಲೂರು ಸಕಲೇಶಪುರ ಭಾಗದಲ್ಲಿ ಬೀಡು ಬಿಟ್ಟಿರೊ ಕಾಡಾನೆ ಹಿಂಡಿನ ಚಲನವಲನ ವೀಕ್ಷಣೆಗಾಗಿ ರೇಡಿಯೋ ಕಾಲರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಳೆಕಾರಣ ಹಾಗು ಸಾಕಾನೆಗಳು ದಸರಾಕ್ಕೆ ಹೋಗಿದ್ದ ಕಾರಣ ಕಾರ್ಯಾಚರಣೆ ತಡವಾಗಿತ್ತು. ಇಂದಿನಿಂದ ಗುಂಪಿನಲ್ಲಿರೊ ಹೆಣ್ಣಾನೆ ಹಾಗು ಒಂಟಿಯಾಗಿ ಓಡಾಡೊ ಸಲಗಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗುತ್ತಿದೆ.ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಗಜಪಡೆ ಉಪಟಳ ತಡೆಗೆ ಜನರು ಆಗ್ರಹಿಸಿದ್ರು, ಕಳೆದ ಒಂದು ತಿಂಗಳಿಂದ ಬೇಲೂರು ತಾಲ್ಲೂಕಿನ ಬಿಕ್ಕೋಡು ಅರೆಹಳ್ಕಿ ಭಾಗದಲ್ಲಿ ಆನೆಗಳ ದಾಂದಲೆ ಹೆಚ್ಚಿತ್ತು.ಕಾಡಾನೆಗಳು ಕಾಫಿ, ಬಾಳೆ, ಅಡಿಕೆ ಬೆಳೆ‌ನಾಶ ಮಾಡುತ್ತಿವೆ. ಗುಂಪು ಗುಂಪಾಗಿ ಓಡಾಡುತ್ತಾ, ಗ್ರಾಮಗಳ ಸನಿಹವೇ ಬಂದು ಜೀವ ಭಯ ಸೃಷ್ಟಿ ಮಾಡುತ್ತಿವೆ. ಆನೆಗಳ ಸಂಚಾರದಿಂದ ಜನರು ತಮ್ಮ‌ಕಾಫಿ ತೋಟಕ್ಕೆ ತೆರಳಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ಸಂಪೂರ್ಣ ಸ್ಥಳಾಂತರಕ್ಕೆ ಜನರು ಆಗ್ರಹಿಸಿದ್ದಾರೆ. ತಾತ್ಕಾಲಿಕ ಕ್ರಮವಾಗಿ ರೇಡಿಯೋ ಕಾಲರಿಂಗ್ ಹಾಗೂ ಕೆಲ‌ ಪುಂಡಾನೆ ಸೆರೆ ಹಿಡಿದು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಡಿಸಿಎಫ್ ಮೋಹನ್ ಕುಮಾರ್, ಹಾಸನ ಎಸಿಎಫ್ ಪ್ರಭು ಆಯ್ ಹಾಗು ಸಕಲೇಶಪುರ ಎಸಿಎಫ್ ಮಹದೇವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಅಭಿಮನ್ಯು, ಭೀಮ, ಅರ್ಜುನ, ಪ್ರಶಾಂತ, ಸೇರಿ ಎಂಟು ಸಾಕಾನೆಗಳು ಭಾಗಿಯಾಗಿವೆ. ಒಟ್ಟು 21 ದಿನ ಕಾರ್ಯಾಚರಣೆಗೆ ಸಿದ್ದತೆ ನಡೆದಿದ್ದು 9 ಆನೆಗಳಿಗೆ ರೇಡಿಯೋ ಕಾಲರ್ ಹಾಗು ಜನರಲ್ಲಿ ಜೀವ ಭಯ ಸೃಷ್ಟಿ ಮಾಡಿರೊ ಐದು ಗಂಡಾನೆಗಳ ಸೆರೆ ಹಿಡಿದು ಸ್ಥಳಾಂತರಕ್ಕೂ ಕ್ರಮ ಕೈಗೊಳ್ಳಲಾಗುತ್ತೆ.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

11 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

12 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

13 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

14 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

14 hours ago