ಮೈಸೂರು

ಮಗನ ಆಟ ಕಣ್ತುಂಬಿಕೊಂಡ ರಾಹುಲ್‌ ದ್ರಾವಿಡ್‌ ದಂಪತಿ

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು.

ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ ಸಹಕಾರದಿಂದ ಕರ್ನಾಕಟ ಹಾಗೂ ಉತ್ತರಖಂಡ್‌ ನಡುವಿನ ನಾಲ್ಕು ದಿನಗಳ ಪಂದ್ಯ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ ತಂಡಗಳ ನಡುವೆ ಪಂದ್ಯ ನಡೆಯಲಿದ್ದು , ಸದ್ಯ  ಕರ್ನಾಟಕ ಹಾಗೂ ಉತ್ತರಖಂಡ್‌ ಪಂದ್ಯಾವಳಿ ಮೈಸೂರಿನಲ್ಲಿ ನಡೆಯುತ್ತಿದೆ.

ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಪ್ರತಿನಿಧಿಸುತ್ತಿದ್ದಾರೆ. ಮಗನ ಆಟವನ್ನು ನೋಡಲು ಪತ್ನಿ ಡಾ.ವಿಜೇತರೊಂದಿಗೆ ದ್ರಾವಿಡ್‌ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

ಸ್ಟೆಪ್ಸ್‌ ಮೇಲೆ ಕೂತು ಆಟ ವೀಕ್ಷಿಸಿದ ʼದಿ ವಾಲ್‌ʼ
ಸಾಮಾನ್ಯವಾಗಿ ಯಾರೇ ಮುಖ್ಯ ಅತಿಥಿಗಳು ಕ್ರಿಕೆಟ್‌ ವೀಕ್ಷಣೆಗೆ ಬಂದರೂ, ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಕಚೇರಿ ಅಥವ ಗಣ್ಯರು ಕುಳಿತುಕೊಳ್ಳುವ ಸ್ಥಳದಲ್ಲಿ ಕೂತು ಪಂದ್ಯ ವೀಕ್ಷಣೆ ಮಾಡುತ್ತಾರೆ. ಆದರೆ ದ್ರಾವಿಡ್‌ ದಂಪತಿಗಳು ಸಾಮಾನ್ಯರಲ್ಲಿ ಸಾಮಾನ್ಯರಂತೆ ಕ್ರೀಡಾಂಗಣದ ಸುತ್ತ ಇರುವ ಮೆಟ್ಟಲಿನ ಮೇಲೆ ಕುಳಿತು ಪಂದ್ಯ ವೀಕ್ಷಣೆ ಮಾಡಿದ್ದು ಎಲ್ಲರ ಗಮನ ಸೇಳೆದಿತ್ತು.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

7 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

7 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

8 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

10 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

10 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

14 hours ago