ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬ ಯೂರಿಯಾ ಮೂಟೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಧನಂಜಯ, ಸಹಾಯಕ ಕೃಷಿ ನಿರ್ದೇಶಕ ಅನಿಲ್ ಕುಮಾರ್, ಕೃಷಿ ಅಧಿಕಾರಿ ಜೈ ಕುಮಾರ್, ವೆಂಕಟಾಚಲಪತಿ ಹಾಗೂ ಡಿವೈಎಸ್‌ಪಿ ರವಿ, ಪೊಲೀಸ್ ಇಲಾಖೆಯ ರಾಧಾ ಹಾಗೂ ಬಸಪ್ಪರವರ ನೇತೃತ್ವದಲ್ಲಿ ದಾಳಿ ಮಾಡಿ ಯೂರಿಯಾ ಮೂಟೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಜತೆಗೆ ೩ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಚೀಲ ಬದಲಿಸಿ ಕೇರಳಕ್ಕೆ ಯೂರಿಯಾ ಸಾಗಿಸುವ ಯತ್ನ ಇರಬಹುದು ಎಂದು ಶಂಕಿಸಲಾಗಿದೆ. ಮೂಟೆಗಳನ್ನು ಸಂಗ್ರಹಿಸಿದ ವ್ಯಕ್ತಿಯ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…
ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…