ಮೈಸೂರು : ಬಿರುಬೇಸಿಗೆ, ಬಿಸಿಗಾಳಿ ನಡುವೆಯೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ನೆರೆ ಹಾವಳಿ ಉಂಟಾಗಬಹುದಾದ ಪ್ರದೇಶಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಹೇಳಿದರು.
ಈ ಬಗ್ಗೆ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆ ಆರಂಭವಾದ ಹಿನ್ನಲೆ ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಗರದಾದ್ಯಂತ ಬೀಳುವ ಹಂತದಲ್ಲಿರುವ ಮರಗಳ ವೈಜ್ಞಾನಿಕ ರೀತಿಯಲ್ಲಿ ತೆರವು ಮಾಡಬೇಕಾಗುತ್ತದೆ. ಅದರಂತೆ ಈಗಾಗಲೇ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಇನ್ನೂ ನಗರದ ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕೆಲಸವನ್ನೂ ಸಹ ಮಾಡಲಾಗುತ್ತದೆ. ನಮ್ಮಲ್ಲೇ ಇರುವ ಯಂತ್ರ ಬಳಸಿ ಹೂಳು ತೆಗೆಯಲಾಗುವುದು. ಅವಶ್ಯಕತೆ ಬಿದ್ದರೆ ಟೆಂಡರ್ ಮೂಲಕ ಕೆಲಸ ನಿರ್ವಹಿಸಲಾಗುವುದು ಎಂದು ಅವರು ಹೇಳಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…