ಮೈಸೂರು : ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮೈಸೂರು, ಕೊಡಗು ಸೇರಿದಂತೆ 18 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಆಂಧ್ರಪ್ರದೇಶದ ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಚಂಡಮಾರುತು ಎದ್ದಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಮೈಸೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಯಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಸೋಮವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚೆರಿಕೆ ನೀಡಿದೆ.