Transparent umbrella under heavy rain against water drops splash background. Rainy weather concept.
ಮೈಸೂರು : ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ನಿನ್ನೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಾವೇರಿ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.
ಮೈಸೂರಿನಲ್ಲಿ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ 6 ಗಂಟೆ ವೇಳೆಗೆ ಅಲ್ಲಲ್ಲಿ ಮಳೆಯಾಗಿದೆ. ಅಲ್ಲದೇ, ರಾತ್ರಿ ಹಾಗೂ ನಾಳೆಯೂ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಕೊಡಗು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಾತಾವರಣಲದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಬೇಸಿಗೆ ಮಳೆಯಾಗಿರುವುದರಿಂದ ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…