ಮೈಸೂರು

ಮೈಸೂರು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಮೈಸೂರು : ಮೈಸೂರು, ಕೊಡಗು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿರುವ ಇಲಾಖೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಲಿದೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

3 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

4 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

4 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

5 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

6 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

6 hours ago