ಮೈಸೂರು : ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಜೈಲರ್ -2 ಸಿನಿಮಾದ ಕೆಲವು ಭಾಗದ ಚಿತ್ರಿಕರಣ ಮೈಸೂರಿನ ಬಿಳಿಕೆರೆಯ ಹುಲ್ಲೇನಹಳ್ಳಿಯಲ್ಲಿ ನಡೆಯುತ್ತಿದ್ದು, ಅಭಿಮಾನಿಗಳು ರಜನಿಕಾಂತ್ ಅವರನ್ನು ನೋಡಲು ಮುಗಿಬಿದ್ದು ಚಿತ್ರಕರಣ ಸ್ಥಳಕ್ಕೆ ದೌಡಯಿಸುತ್ತಿದ್ದಾರೆ.
ಇದನ್ನೂ ಓದಿ: ಮೈಸೂರಲ್ಲಿ ಜೈಲರ್-2 ಶೂಟಿಂಗ್ ಆರಂಭ ; 3 ದಿನ ವಾಸ್ತವ್ಯ ಹೂಡಲಿರೋ ತಲೈವಾ
ಚಿತ್ರೀಕರಣದ ಸಂದರ್ಭದಲ್ಲಿ ಸಾರ್ವಜನಿಕ ನಿರ್ಬಂಧಕ್ಕೆ ಚಿತ್ರ ತಂಡವು ಎಚ್ಚರ ವಹಿಸಿದೆ. ಎಲ್ಲ ಕಡೆಗಳಲ್ಲಿ ಯೂ ಬಿಗಿ ಬಂದೋ ಬಸ್ತ್ ಹಾಕಲಾಗಿದೆ. ಚಿತ್ರೀಕರಣ ಮುಗಿದ ನಂತರ ಅಭಿಮಾನಿಗಳು ರಜನಿಕಾಂತ್ ಅವರನ್ನು ನೋಡಲು ಚಿತ್ರೀಕರಣದ ಸ್ಥಳಕ್ಕೆ ದೌಡಾಯಿಸಿದ್ದು, ನಟ ರಜನಿಕಾಂತ್ ಅಭಿಮಾನಿಗಳಿಗೆ ಕೈಬೀಸಿ, ನಮಸ್ಕರಿಸಿ ಕಾರಿನಲ್ಲಿ ತೆರಳುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡುತ್ತಿವೆ.
ಈ ಚಿತ್ರದ ಚಿತ್ರೀಕರಣವೂ ನಾಲ್ಕರಿಂದ ಐದು ದಿನಗಳವರೆಗೆ ನಡೆಯಲಿದೆ. ಈಗಾಗಲೇ ಮೈಸೂರು ಭಾಗದ ಹುಲ್ಲೇನಹಳ್ಳಿಯ ಸೇತುವೆ ಮೇಲೆ ಕೆಲವು ದೃಶ್ಯಗಳು ಹಾಗೂ ಆಕ್ಷನ್ ದೃಶ್ಯಗಳನ್ನು ಮೂರು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಇದೇ ಸ್ಥಳದಲ್ಲಿ ೪೦ ವರ್ಷಗಳ ಹಿಂದೆ ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್ ಅವರ ನಟನೆಯ ಹೊಸಬೆಳಕು ಸಿನಿಮಾ ಚಿತ್ರೀಕರಣವಾಗಿತ್ತು. ಇದೀಗ ಚಿತ್ರತಂಡವು ಹುಣಸೂರಿನ ಬಿಳಿಕೆರೆಯಲ್ಲಿ ಚಿತ್ರೀಕರಣ ನಡೆಸುತ್ತಿದೆ. ಚಿತ್ರೀಕರಣಕ್ಕಾಗಿ ಚಿತ್ರತಂಡ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…