ಮೈಸೂರು: ಜನವರಿ 22ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಮತ್ತು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಮೈಸೂರಿನಲ್ಲಿ ಶ್ರೀರಾಮರ ಹೆಸರಿನಲ್ಲಿ ಆಯೋಜಿಸಲಾಗಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನೀಡಲು ಮೈಸೂರು ಪೊಲೀಸರು ನಿರಾಕರಿಸಿದ್ದಾರೆ.
ಮೈಸೂರಿನ ಕನ್ಯಕಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನಾಳೆ(ಜನವರಿ 22) ಲಕ್ಷದೀಪೋತ್ಸವಕ್ಕೆ ಅನುಮತಿ ಕೋರಲಾಗಿದೆ. ಆದರೆ, ಆ ಸ್ಥಳವು ಹೆಚ್ಚು ಜನಸಂದಣಿ ಮತ್ತು ಹೆಚ್ಚು ವಾಹನ ಸಂಚಾರ ಇರುವುದರಿಂದ ಅಲ್ಲಿ ಲಕ್ಷ ದೀಪೋತ್ಸವ ನಡೆಸಿದರೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ಪೊಲೀಸರು ತಿಳಿಸಿದ್ದಾರೆ