ಮೈಸೂರು

ರಂಗಾಯಣ : ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ ; ಜೂ.30 ಕೊನೆ ದಿನ

ಮೈಸೂರು: ಮೈಸೂರು ರಂಗಾಯಣದ ವತಿಯಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿ (ಡಿಪ್ಲೋಮೊ)ಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವು ರಂಗ ಶಿಕ್ಷಣ ತರಬೇತಿ ಕೋರ್ಸ್‌ಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸ ಬಹುದಾಗಿದ್ದು ಕೋರ್ಸಿನ ಒಂದು ವರ್ಷದ ವ್ಯಾಸಾಂಗ ಅವಧಿಯ ಊಟ, ವಸತಿ ಹಾಗೂ ಪಠ್ಯ ಸಾಮಾಗ್ರಿಗಳ ವೆಚ್ಚವನ್ನು ವಿದ್ಯಾರ್ಥಿ ವೇತನದ ಮೂಲಕ ಭರಿಸಲಾಗುತ್ತದೆ.

ಅರ್ಹತೆಗಳು: ರಂಗಭೂಮಿಯ ಪ್ರಾಥಮಿಕ ಅನುಭವವಿರಬೇಕು. ಕನಿಷ್ಠ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು. 18 ವರ್ಷ ಮೇಲ್ಪಟ್ಟ ಹಾಗೂ 28 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

http://rangayanamysore.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಪತ್ರ ಪಡೆದು, ಅಗತ್ಯ ದಾಖಲೆಯೊಂದಿಗೆ ರಂಗಾಯಣ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ 300.ರೂ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 200.ರೂ ಡಿ.ಡಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದೆ. 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9449630465, 08122512639 ಸಂಖ್ಯೆ ಸಂಪರ್ಕಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

13 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

18 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

20 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

23 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

25 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

29 mins ago