ಮೈಸೂರು

ರಥಸಪ್ತಮಿ ಆಚರಣೆ: ಅಂಬಾವಿಲಾಸ ಅರಮನೆಯಲ್ಲಿ ವಿಶೇಷ ಪೂಜೆ

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯಲ್ಲಿ ರಥಸಪ್ತಮಿ ಆಚರಣೆ ಹಿನ್ನೆಲೆ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಮಾಡಲಾಗಿದೆ.

ಸಾಂಸ್ಕೃತಿಕ ನಗರಿಯಲ್ಲಿ ಇಂದು(ಫೆಬ್ರವರಿ.5) ರಥಸ್ತಪಮಿ ಪ್ರಯುಕ್ತ ನಗರದ್ಯಾಂತದ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ. ಅಂತೆಯೇ ಅಂಬಾವಿಲಾಸ ಅರಮನೆಯಲ್ಲಿಯೂ ಕೂಡ ಅಲ್ಲಿನ ದೇವಾಲಯಗಳ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನೂ ಅಂಬಾವಿಲಾಸ ಅರಮನೆ ಅಂಗಳದಲ್ಲಿ ಅದ್ದೂರಿಯಾಗಿ ನಡೆದ ಭವ್ಯ ಮೆರವಣಿಗೆಯಲ್ಲಿ ಉತ್ಸವ ಮೂರ್ತಿಗಳ ದರ್ಶನವನ್ನು ಸಾರ್ವಜನಿಕರು ಪಡೆದಿದ್ದಾರೆ.

ರಥಸಪ್ತಮಿಯ ಹಿನ್ನೆಲೆ ಏನು?

ಇಡೀ ಜಗತ್ತಿಗೆ ಬೆಳಕು ಕೊಡುವವನು ಸೂರ್ಯ. ಅನೇಕ ಮಂದಿ ಪ್ರತಿನಿತ್ಯ ಬೆಳಿಗ್ಗೆ ಸೂರ್ಯನಿಗೆ ನಮಸ್ಕರಿಸಿ ಅರ್ಘ್ಯ ನೀಡುತ್ತಾರೆ. ಜಗತ್ತಿಗೆ ಬೆಳಕು ನೀಡುವ ಸೂರ್ಯದೇವನನ್ನು ರಥಸಪ್ತಮಿಯಂದು ವಿಶೇಷವಾಗಿ ಪೂಜಿಸಲಾಗುತ್ತದೆ. ಮಾಘ ಮಾಸ ಶುಕ್ಲ ಪಕ್ಷದ ಸಪ್ತಮಿಯ ದಿನವನ್ನು ರಥ ಸಪ್ತಮಿಯಾಗಿ ಆಚರಿಸಲಾಗುತ್ತದೆ. ಇದನ್ನು ಸೂರ್ಯ ಜಯಂತಿ ಮತ್ತು ಅಚಲಾ ಸಪ್ತಮಿ ಎಂದು ಕರೆಯಲಾಗುತ್ತದೆ. ಈ ದಿನ ಸೂರ್ಯ ದೇವನಿಗೆ ಅರ್ಘ್ಯವನ್ನು ನೀಡಿ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ರಥ ಸಪ್ತಮಿಯ ದಿನದಂದು ಸೂರ್ಯನ ಆರಾಧನೆ ಮಾಡಿದರೆ ಆಯುಷ್ಯ, ಸಂಪತ್ತಿನ ವೃದ್ಧಿಯಾಗುತ್ತದೆ ಹಾಗೂ ಮನುಷ್ಯನ ಎಲ್ಲ ಪಾಪಗಳಿಗೂ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಇದೆ.

ಧಾರ್ಮಿಕ ನಂಬಿಕೆಗಳ ಪ್ರಕಾರ ಮಾಘ ಮಾಸದ ಶುಕ್ಲ ಪಕ್ಷದ ಏಳನೇ ದಿನದಂದು ಸೂರ್ಯ ದೇವರು ತನ್ನ ರಥದ ಮೇಲೆ ಸವಾರಿ ಮಾಡಿ ಜಗತ್ತಿಗೆ ಬೆಳಕು ನೀಡಲು ಪ್ರಾರಂಭಿಸಿದ. ಈ ಕಾರಣಕ್ಕಾಗಿಯೇ ಈ ದಿನವನ್ನು ಸೂರ್ಯ ಜಯಂತಿ ಎಂದು ಹೇಳಲಾಗುತ್ತದೆ. ರಥ ಸಪ್ತಮಿಯ ದಿನ ಸೂರ್ಯ ದೇವನ ಜನ್ಮದಿನ ಎಂಬ ಪ್ರತೀತಿ ಇದೆ. ರಥ ಸಪ್ತಮಿಯ ದಿನ ಸೂರ್ಯನ ಪೂಜೆ ಮಾಡಿದರೆ ಜೀವನದ ಕಷ್ಟಗಳು ನಿವಾರಣೆಯಾಗುತ್ತವೆ. ಅಂದಿನ ದಿನ ಪವಿತ್ರ ನದಿಯಲ್ಲಿ ಸ್ನಾನ ಮಾಡಿ ಅರ್ಘ್ಯ ನೀಡುವುದರಿಂದ ಜಾತಕದಲ್ಲಿನ ದೋಷಗಳು ಹಾಗೂ ಆರೋಗ್ಯ ಸಮಸ್ಯೆಗಳು ದೂರವಾಗುತ್ತದೆ ಎಂಬ ಭಾವನೆ ಇದೆ.

ಅರ್ಚನ ಎಸ್‌ ಎಸ್

Recent Posts

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

9 mins ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

57 mins ago

ಮೈಸೂರಲ್ಲಿ ಡ್ರಗ್ಸ್‌ ಪತ್ತೆ | ಸರ್ಕಾರ, ಪೊಲೀಸ್‌ ಮತ್ತೇ ವಿಫಲ ; ಯದುವೀರ್‌ ಅಸಮಾಧಾನ

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…

1 hour ago

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ ವಚನ

ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…

2 hours ago

ದಂಟಳ್ಳಿ ಯೋಜನೆಗೆ ಡಿ.ಪಿ.ಆರ್ʼಗೆ ಒತ್ತಾಯಸಿ ಬೃಹತ್‌ ಪ್ರತಿಭಟನೆ

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…

2 hours ago

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

2 hours ago