ಮೈಸೂರು

ಹಂಪಾಪುರ ಸರ್ಕಾರಿ ಶಾಲೆಗೆ ಅನೇಕ ಪರಿಕರಗಳನ್ನು ನೀಡಿದ ರವಿ ಸಂತು ಬಳಗ

ಎಚ್.ಡಿ.ಕೋಟೆ: ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರವಿ ಸಂತು ಬಳಗದ ವತಿಯಿಂದ ಮೂಲಭೂತ ಸೌಕರ್ಯ ಒದಗಿಸಲಾಯಿತು.

ಶಾಲೆಗೆ ರವಿ ಸಂತು ಬಳಗದ ಪರವಾಗಿ ರಮೇಶ್ ನಾಗರಾಜ ಅವರ ಕುಟುಂಬದ ಹೆಸರಲ್ಲಿ ಸಮಗ್ರ ಅಭಿವೃದ್ಧಿ ಸಂಸ್ಥಾಪಕರಾದ ಡಾಕ್ಟರ್ ಸ್ನೇಹ ರಾಕೇಶ್ ಅವರ ನೇತೃತ್ವದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ವಾಟರ್ ಪ್ಯೂರಿಫೈಯರ್, ಜೆರಾಕ್ಸ್ ಪ್ರಿಂಟರ್, ಮಕ್ಕಳಿಗೆ ವಿದ್ಯಾ ಸಾಮಗ್ರಿ, ವಾಟರ್ ಬಾಟಲ್ಸ್ ನೀಡಲಾಯಿತು.

ಇದೇ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ 2025ನೇ ಸಾಲಿನ ರಾಜ್ಯ ಸೇವಾ ರತ್ನ ಪ್ರಶಸ್ತಿಯನ್ನು ನೀಡಲಾಯಿತು. ಇದೇ ವೇಳೆ 35 ವರ್ಷಗಳ ಕಾಲ ಕುಂಚ ಕಲೆಯನ್ನು ವೃತ್ತಿಯಾಗಿಸಿಕೊಂಡು ಸೇವೆ ಮಾಡುತ್ತಿರುವ ಕಲೆ ಪ್ರಕಾಶ್ ಅವರಿಗೂ ಕೂಡ ಡಾಕ್ಟರ್ ವಿಷ್ಣುವರ್ಧನ್ ಹೆಸರಿನಲ್ಲಿ ಕುಂಚ ಕಲಾ ರತ್ನ ಪ್ರಶಸ್ತಿಯನ್ನು ಕೊಡುವುದರ ಮೂಲಕ ರವಿ ಸಂತು ಬಳಗ ಗೌರವ ಸಲ್ಲಿಸಿದೆ.

ಕಾರ್ಯಕ್ರಮದಲ್ಲಿ ರವಿ ಸಂತು ಬಳಗದ ಸುರೇಶ್ ಗೌಡ್ರು, ಶ್ರೀಕಂಠ, ರವಿ ಹಂಸಲೇಖ, ಕಿರಣ್, ಮಿಮಿಕ್ರಿ ಸುಧಾಕರ್, ಶ್ರೀನಿವಾಸ್, ಮಹಿಳಾ ಸಾಧಕಿ ಡಾಕ್ಟರ್ ಸ್ನೇಹ ರಾಕೇಶ್, ಚಂದ್ರು ಜೂನಿಯರ್ ಪುನೀತ್ ರಾಜಕುಮಾರ್‌, ಕಲೆ ಪ್ರಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

2 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

2 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

2 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

2 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

2 hours ago