Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮೇಕೆದಾಟು ಯೋಜನೆ ಜಾರಿಗೆ ಸನ್ನದ್ಧ : ಡಿಕೆಶಿ

DCM DK Shivakumar

ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆಯಲ್ಲಾ? ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ” ನಮ್ಮ ಅಚ್ಚುಕಟ್ಟು ಪ್ರದೇಶವೂ ಶೇ.6 ರಷ್ಟು ಹೆಚ್ಚಾಗಿದೆ. ಯೋಜನೆ ಜಾರಿಗೆ ನಾವು ಸನ್ನದ್ಧರಾಗಿದ್ದೇವೆ. ನ್ಯಾಯಾಲಯದಲ್ಲಿಯೂ ನಮಗೆ ನ್ಯಾಯ ಸಿಗುತ್ತದೆ. ಈಗಾಲೇ ಕನಕಪುರದಲ್ಲಿ ಮೇಕೆದಾಟು ಕಚೇರಿ ತೆರೆದಿದ್ದೇವೆ. ಭೂಸ್ವಾಧೀನ, ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಎಲ್ಲಿ ಭೂಮಿ ನೀಡಬೇಕು ಎಂದು ನಾವು ತಯಾರಾಗಿದ್ದೇವೆ” ಎಂದು ತಿಳಿಸಿದರು.

ಕಾವೇರಿ ಹಾಗೂ ಕಬಿನಿ‌ ನೀರಾವರಿ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಪ್ರಶ್ನೆಗೆ, “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಕಾಲುವೆ ಸ್ವಚ್ಚತೆ, ನೀರಿನ ಸೋರಿಕೆ ತಡೆಗಟ್ಟುವಿಕೆ, ಕೊನೆ ಪ್ರದೇಶಕ್ಕೆ ನೀರು ತಲುಪಿಸುವುದು ಹೀಗೆ ಅನೇಕ ಕೆಲಸಗಳನ್ನು ಮಾಡಿದ್ದೇವೆ. ಕಬಿನಿ ಪ್ರದೇಶಕ್ಕೆ ರೂ.400 ಕೋಟಿ ನೀಡಿದ್ದೇವೆ” ಎಂದರು.

ಕಾವೇರಿ ಆರತಿ ಘೋಷಣೆ ಮಾಡಿ ಒಂದು ವರ್ಷವಾಗಿರುವ ಬಗ್ಗೆ ಕೇಳಿದಾಗ, “ಒಂದಷ್ಟು ರೈತರು ಆತಂಕದಲ್ಲಿದ್ದಾರೆ. ಅವರು ಆತಂಕಕ್ಕೆ ಒಳಗಾಗುವ ಪ್ರಮೇಯವಿಲ್ಲ. ಪೂಜೆ ಹಾಗೂ ಪ್ರಾರ್ಥನೆ ಮಾಡುವುದರಲ್ಲಿ ಏನಿದೆ? ಪೂಜೆಯನ್ನು ಚಿಕ್ಕದಾಗಿಯೂ ದೊಡ್ಡದಾಗಿಯೂ ಮಾಡಬಹುದು. ಸುಮಾರು 1500 ಜನಕ್ಕೆ ಪ್ರತ್ಯಕ್ಷವಾಗಿ ಉದ್ಯೋಗ ದೊರೆಯುತ್ತದೆ” ಎಂದರು.

ಕೆಆರ್ ಎಸ್, ಕಬಿನಿಗೆ ಒಟ್ಟಾಗಿ ಬಾಗಿನ ಅರ್ಪಣೆ ಮಾಡುವಿರಾ ಎಂದು ಕೇಳಿದಾಗ, “ಈಗ ಕೆಆರ್ ಎಸ್ ಜೂನ್ ತಿಂಗಳಲ್ಲಿ ತುಂಬಿ ಇತಿಹಾಸದ ಪುಟ ಸೇರಿದೆ” ಎಂದರು.

Tags:
error: Content is protected !!