ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.
ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು.
ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ
ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು. ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು.
ಸಂಪುಟ ಪುನರ್ರಚನೆ- ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ
ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು.ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲಾಗುವುದು. ಅವರು ಸಮಯ ನೀಡಿದರೆ ಚರ್ಚಿಸಲಿರುವುದಾಗಿ ತಿಳಿಸಿದರು.
ಬಳ್ಳಾರಿ ಘಟನೆ-ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ
ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದರು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ
ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು.
ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಸೂಚನೆ
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗಧಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನರ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ ಎಂದರು.
ಬಲೂನ್ ಸ್ಪೋಟ ಪ್ರಕರಣ- ಮೃತರ ಕುಟುಂಬಗಳಿಗೆ 5 ಲಕ್ಷ ರೂ.ಪರಿಹಾರ
ಮೈಸೂರಿನ ಅರಮನೆಯ ಮುಂಭಾಗದಲ್ಲಿ ಬಲೂನ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದರು.
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…