ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು.
ಮಂಗಳವಾರ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳೆ ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದ್ಯೋಗ ಸಿಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದು ಹೇಳಿದರು.
ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ಜಾರಿಗೆ ತಂದು ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲಾಗುತ್ತಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುಧಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ದೇಶಕ್ಕೆ ತನ್ನದೇ ಆದ ಪರಂಪರೆ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರು ವಿಭಾಗದಲ್ಲಿ 171 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕಿ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…