ನಂಜನಗೂಡು: ರಾಜ್ಯದಲ್ಲಿ ಪಶುವೈದ್ಯರ ಕೊರತೆ ನೀಗಿಸಲು ಶೀಘ್ರದಲ್ಲೇ 400 ಮಂದಿ ಪಶು ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಶನಿವಾರ(ಜು.13) ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನೂತನ ಪಶುಚಿಕಿತ್ಸಾ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಪಶುವೈದ್ಯರ ನೇಮಕದ ಜತೆಗೆ ಪಶುಚಿಕಿತ್ಸಾಲಯಗಳ ಕಟ್ಟಡ ಕೊರತೆ ನೀಗಿಸಲು ರಾಜ್ಯಾಂದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನವಿಗೆ ಸ್ಪಂದಿಸಿ ರಾಜ್ಯಾಂದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡ ಮಂಜೂರು ಮಾಡಿದ್ದಾರೆ. ಅದರಲ್ಲಿ ಮೈಸೂರು ಜಿಲ್ಲೆಗೆ 12 ಪಶು ಚಿಕಿತ್ಸಾಲಯ ಕಟ್ಟಡಗಳು ಲಭ್ಯವಾಗಿದೆ ಎಂದರು.





