ಮೈಸೂರು

ಕಾಂಗ್ರೆಸ್‌ ಸುಪಾರಿ ಪಡೆದು ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡ ಯತ್ನಾಳ್‌: ರೇಣುಕಾಚಾರ್ಯ

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಾಂಗ್ರೆಸ್‌ನಿಂದ ಸುಪಾರಿ ಪಡೆದು ಸ್ವಪಕ್ಷವಾದ ಬಿಜೆಪಿ ವಿರುದ್ಧವೇ ಹೋರಾಟ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು(ನ.30) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೋಲಿಗೆ ಯತ್ನಾಳ್‌ ಅವರೇ ನೇರ ಕಾರಣ.ಅವರು ಹಿಂದುತ್ವದ ಮುಖವಾಡ ಧರಿಸಿ, ವಿಜಯಪುರದ ಪ್ರಭಾವಿ ಸಚಿವರ ಜೊತೆ ಮ್ಯಾಚ್‌ ಫಿಕ್ಸಿಂಗ್‌ ಮಾಡಿಕೊಂಡು ಹಿಟ್ಲರ್‌ ರೀತಿ ವರ್ತಿಸುತ್ತಿದ್ದಾರೆ. ಒಂದೇ ಪಕ್ಷದಲ್ಲಿದ್ದುಕೊಂಡು ಮುಡಾ ಪಾದಯಾತ್ರೆಗೆ ಹಾಗೂ ವಕ್ಫ್‌ ಮಂಡಳಿ ವಿರುದ್ಧ ಪ್ರತಿಭಟನೆಗೆ ಬರಲಿಲ್ಲ. ಹೀಗಾಗಿ ಯತ್ನಾಳ್‌ ಪರೋಕ್ಷವಾಗಿ ಭ್ರಷ್ಟಾಚಾರವನ್ನು ಬೆಂಬಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸ್ವಪಕ್ಷದ ಇಂತಹ ಶಕುನಿಗಳು ಮತ್ತು ಮೀರ್‌ ಸಾಧಕರು ಪ್ರತಿನಿತ್ಯ ಕಾಟ ಕೊಡುತ್ತಲೇ ಇದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ಘಟಕದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಹೈಕಮಾಂಡ್‌ ಹೊರತು ಯಡಿಯೂರಪ್ಪ ಅಲ್ಲ. ಒಂದು ವೇಳೆ ಯಡಿಯೂರಪ್ಪ ಹಾಗೂ ವಿಜಯೇಂದ್ರಗೆ ನಿಂದಿನಿಸಿದರೆ ಬಿಜೆಪಿ ಹೈಕಮಾಂಡ್‌ ನಿಂದಿಸಿದಂತೆ ಎಂದು ಹೇಳಿದ್ದಾರೆ.

ಬಸವಣ್ಣ ಅವರು ಎಲ್ಲ ವರ್ಗದವರಿಗೆ ಸೇರಿದ ವಿಶ್ವಗುರು. ಅಂತಹವರಿಗೆ ಅಪಮಾನ ಮಾಡಿದ ಯತ್ನಾಳ್‌ರ ವಿರುದ್ಧ ಮಠಾಧೀಶರು ಛೀಮಾರಿ ಹಾಕಬೇಕು. ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರ ಒಂದು ಶಕ್ತಿಯಾಗಿದ್ದಾರೆ. ಆದರೆ ಯತ್ನಾಳ್‌ ಅವರದ್ದು ನಾಲ್ಕು ಜನರ ಒಂದು ಗುಂಪು ಅಷ್ಟೇ. ನಾವೆಲ್ಲರೂ ಬಣ ರಾಜಕೀಯ ಮಾಡುತ್ತಿಲ್ಲ. ಅದರ ಬದಲಾಗಿ ಶಕ್ತಿ ಪ್ರದರ್ಶನ ಮಾಡುತ್ತಿದ್ದೇವೆ . ಹೀಗಾಗಿ ತಾಯಿ ಚಾಮುಂಡೇಶ್ವರಿ ಅವರು ಅದಷ್ಟು ಬೇಗ ಇಂತಹ ಆಂತರಿಕ ದುಷ್ಟರನ್ನು ಸಂಹಾರ ಮಾಡಲಿ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

14 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

33 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

56 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago